ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆಯ ಮಿತಿಯನ್ನು ಪ್ರತಿದಿನ 50 ಸಾವಿರಕ್ಕೆ ಹೆಚ್ಚಿಸುವಂತೆ ಕೇರಳ ಹೈಕೋರ್ಟ್ ತೀರ್ಪನ್ನು ನೀಡಿತ್ತು. ಆದರೆ ಇದೀಗ ಅತೀರ್ಪನ್ನು ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ಡಿಸೆಂಬರ್ 18ರಂದು ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರ, ಕೋರೋನ ಸೋಂಕಿನ ಭೀತಿಯ ನಡುವೆ ಈ ಆದೇಶವು ಪೊಲೀಸ್ ಸಿಬ್ಬಂದಿ ಹಾಗೂ ಆರೋಗ್ಯ ಅಧಿಕಾರಿಗಳಿಗೆ ಬಹುದೊಡ್ಡ ತಲೆನೋವಾಗಿ ಮಾರ್ಪಡಬಹುದು ಎಂದು ಹೇಳುತ್ತಿದೆ.
ಇಷ್ಟೇ ಅಲ್ಲದೆ ರಾಜ್ಯ ಸರಕಾರ ಹಾಗೂ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ, ಭಕ್ತಾದಿಗಳ ಸಂಖ್ಯೆಯ ಮಿತಿಯನ್ನು ವಾರದ ದಿನಗಳಲ್ಲಿ 2000ಕ್ಕೆ ಮತ್ತು ವಾರಾಂತ್ಯದಲ್ಲಿ 3000ಕ್ಕೆ ಸೀಮಿತಗೊಳಿಸುವಂತೆ ಸಲಹೆ ನೀಡಿತ್ತು.
ಡಿಸೆಂಬರ್ 20ರಿಂದ ಪ್ರಾರಂಭವಾಗಿರುವ ಶಬರಿಮಲೆ ದೇವಸ್ಥಾನದ ಉತ್ಸವ ಜನವರಿ 14ರ ವರೆಗೆ ನಡೆಯಲಿದ್ದು, ಕೋವಿಡ್ ಸಾಂಕ್ರಾಮಿಕ ರೋಗ ಹರಡದಂತೆ ತಡೆಯಲು ಸರ್ಕಾರ ಉನ್ನತಮಟ್ಟದ ಸಮಿತಿ ರಚಿಸಿದ್ದು, ಅದರ ನೇತೃತ್ವದಲ್ಲಿ ಭಕ್ತರನ್ನು ನಿಯಂತ್ರಿಸಲಾಗುವುದು ಎಂದು ತಿಳಿಸಿದೆ.