ಚೆನ್ನೈ: ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ರಕ್ತದೊತ್ತಡದಲ್ಲಿ ಏರುಪೇರು ಕಂಡು ಬಂದ ಕಾರಣ ಅವರನ್ನು ಚಿಕಿತ್ಸೆಗಾಗಿ ಶುಕ್ರವಾರ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಡಿಸೆಂಬರ್ 31ರಂದು ತಮ್ಮ ರಾಜಕೀಯ ಪಕ್ಷಗಳು ಘೋಷಣೆಯನ್ನು ಮಾಡಲಿರುವ ಹಿನ್ನೆಲೆಯಲ್ಲಿ ಚೆನ್ನೈ ಹೊರವಲಯದಲ್ಲಿರುವ ಅವರ ಫಾರಂ ಹೌಸ್ ನಲ್ಲಿ ಇದ್ದರು ಎನ್ನಲಾಗುತ್ತಿದೆ. ಹೈದರಾಬಾದ್ನ ಅಪೊಲೊ ಆಸ್ಪತ್ರೆಯ ಹೇಳಿಕೆಯ ಪ್ರಕಾರ, ಕೆಲದಿನಗಳ ಹಿಂದೆಯಷ್ಟೇ ಅವರು ಕೋವಿಡ್ ಟೆಸ್ಟ್ ಮಾಡಿಸಿದ್ದು, ನೆಗೆಟಿವ್ ವರದಿ ಬಂದಿತ್ತು.