ಚೆನ್ನೈ: ಸೂಪರ್ ಸ್ಟಾರ್ ರಜಿನಿಕಾಂತ್ ಅವರ ರಾಜಕೀಯ ಪ್ರವೇಶ ಹಾಗೂ ಹೊಸ ಪಕ್ಷದ ಆಗಮನಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ರಜನಿಕಾಂತ್ ರಾಜಕೀಯ ಪಕ್ಷವನ್ನು ಸ್ಥಾಪನೆ ಮಾಡುತ್ತಿಲ್ಲ ಎಂದು ಟ್ವೀಟ್ಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ.
ಡಿಸೆಂಬರ್ 31ರಂದು ಹೊಸ ರಾಜಕೀಯ ಪಕ್ಷದ ಬಗ್ಗೆ ಮಹತ್ವದ ಘೋಷಣೆಯನ್ನು ಮಾಡುತ್ತೇನೆ ಎಂದು ರಜಿನಿಕಾಂತ್ ಈ ಹಿಂದೆ ಹೇಳಿದ್ದರು. ಆದರೆ ಇದೀಗ ಸುದೀರ್ಘ ಮೂರು ಪುಟದ ಪತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿರುವ ಅವರು ತಮ್ಮ ಈ ನಿರ್ಧಾರಕ್ಕೆ ಅನಾರೋಗ್ಯದಲ್ಲಿ ಉಂಟಾಗಿರುವ ಏರುಪೇರು ಕಾರಣ ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ಕಳೆದ ಡಿಸೆಂಬರ್ 25ರಂದು ರಕ್ತದೊತ್ತಡ ಸಮಸ್ಯೆಯಿಂದ ಹೈದರಾಬಾದ್ ನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದ ರಜಿನಿಕಾಂತ್, ಚಿಕಿತ್ಸೆಯ ನಂತರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.