ಮುಂಬೈ : ಹರಡುತ್ತಿರುವ ಹೊಸ ರೂಪಾಂತರ ಹೊಂದಿರುವ ಕೊರೋನವೈರಸ್ ಭೀತಿಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಜನವರಿ 31ರವರೆಗೆ ಈ ಲಾಕ್ ಡೌನ್ ಜಾರಿಯಾಗಲಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ದೇಶದಲ್ಲಿ ಈಗಾಗಲೇ ರೂಪಾಂತರ ಹೊಂದಿರುವ ಕೊರೊನಾ ವೈರಸ್ ಎಂಟ್ರಿ ಆಗಿದ್ದು, ಬ್ರಿಟನ್ ನಿಂದ ಭಾರತಕ್ಕೆ ಬಂದ 20 ಜನರಲ್ಲಿ ಈಗಾಗಲೇ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಹಾರಾಷ್ಟ್ರದಲ್ಲಿ ಈ ಘೋಷಣೆಯನ್ನು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.