ನವದೆಹಲಿ: ಭಾರತದೊಂದಿಗೆ 2021ರಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ಪ್ರಯತ್ನಿಸಲಿದ್ದೇವೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಹೇಳಿದ್ದು, ಚೀನಾಗೆ ದೊಡ್ಡ ಹಿನ್ನಡೆಯಾಗಿದೆ.
ದೆಹಲಿ ಮತ್ತು ಮಾಸ್ಕೋ ವಿಶ್ವ ಹಾಗೂ ಪ್ರಾಂತೀಯ ವಿಚಾರದಲ್ಲಿ ಸಹಭಾಗಿಯಾಗಲು ಎಲ್ಲಾ ರೀತಿಯ ಪ್ರಯತ್ನ ಮಾಡಲಿದೆ ಎಂದು ಅವರು ತಿಳಿಸಿದರು.
ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದ ಅಧ್ಯಕ್ಷ ಕ್ರಿಸ್ಮಸ್ ಮತ್ತು ಹೊಸ ವರ್ಷದ ಶುಭಾಶಯಗಳನ್ನು ಹಾರೈಸಿದರು.
2020ರಲ್ಲಿ ರಷ್ಯಾ ಮತ್ತು ಭಾರತ ಕೋವಿಡ್ ಸಹಿತ ಹಲವಾರು ಸಮಸ್ಯೆಗಳನ್ನು ಎದುರಿಸಿದೆ. ಆದರೆ ಎರಡು ರಾಷ್ಟ್ರಗಳು ತಮ್ಮ ಸಂಬಂಧವನ್ನು ಮುಂದಿನ ವರ್ಷ ಮತ್ತಷ್ಟು ಬಲಪಡಿಸಲಿದೆ ಎಂದರು.