ಕರಾಕ್: ಕರಕ್ ಜಿಲ್ಲೆಯ ಖೈಬರ್ ಪಖ್ತುಂಖಾವಾ ಪ್ರಾಂತ್ಯದ ಸ್ಥಳೀಯ ಹಿಂದೂ ದೇವಾಲಯವೊಂದನ್ನು, ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಜನರ ಗುಂಪೊಂದು ನಾಶ ಮಾಡಿ ಬೆಂಕಿ ಹಚ್ಚಿದ ಘಟನೆ ನಡೆದಿದ್ದು, ಇದೀಗ ಎಲ್ಲೆಡೆ ಸುದ್ದಿಯಾಗಿದೆ.
ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತದ್ದು, ಪಾಕಿಸ್ತಾನದ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಪ್ರಪಂಚದ ಇತರ ಪ್ರದೇಶಗಳಲ್ಲಿರುವ ಮಾನವಹಕ್ಕು ಕಾರ್ಯಕರ್ತರು ಖಂಡಿಸುತ್ತಿದ್ದಾರೆ.
ಕರಕ್ ಜಿಲ್ಲೆಯ ಹಿಂದೂ ದೇವಾಲಯವನ್ನು ವಿಸ್ತರಿಸಲು ಹಿಂದೂಗಳು ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿದ್ದರು. ಅದಕ್ಕೆ ವಿರೋಧಿಸಿರುವ ಸ್ಥಳೀಯ ಧರ್ಮಗುರುಗಳು ಈ ದೇವಾಲಯವನ್ನು ನಾಶಮಾಡುವುದಕ್ಕೆ ಮುಂದಾಗಿದ್ದು, ಈ ಕೃತ್ಯಕ್ಕೆ ಸ್ಥಳೀಯ ಆಡಳಿತ ಮಂಡಳಿ ಹಾಗೂ ಪೊಲೀಸರು ಮುಖ ಪ್ರೇಕ್ಷಕರಾಗಿದ್ದಾರೆ ಎಂದು ಕರಾಚಿಯ ಪತ್ರಕರ್ತರೊಬ್ಬರು ಟ್ವೀಟ್ ಮೂಲಕ ಪ್ರಪಂಚ ತಿಳಿಸಿದ್ದಾರೆ.