ಲಕ್ನೋ: ವೈಯಕ್ತಿಕ ಕಾರಣಗಳಿಂದಾಗಿ ಮಹಿಳಾ ಸಬ್ ಇನ್ಸ್ಪೆಕ್ಟರ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾಗಿರುವ ಅಧಿಕಾರಿಯನ್ನು ಅರ್ಜೂ ಪವಾರ್ ಎಂದು ಗುರುತಿಸಲಾಗಿದ್ದು, ಅವರು ಬುಲಂದ್ ಶಹರ್ ಜಿಲ್ಲೆಯ ಅನೂಪ್ ಶಹರ್ ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ವರದಿಗಳು ತಿಳಿಸಿವೆ.
ಅರ್ಜೂ ಅವರು 2015ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದು, ಮೂಲತಹ ಶಾಮ್ಲಿ ಜಿಲ್ಲೆಯವರು ಎಂದು ತಿಳಿದುಬಂದಿದೆ.