ಉತ್ತರ ಪ್ರದೇಶ: ಮಳೆಯಿಂದಾಗಿ ಸ್ಮಶಾನ ಒಂದರ ಮೇಲ್ಛಾವಣಿ ಕುಸಿದು 18 ಮಂದಿ ಸಾವನ್ನಪ್ಪಿದ್ದ ಘಟನೆ ಉತ್ತರಪ್ರದೇಶದ ಮೂರಜ್ ನಗರ್ ಸಿಟಿ ಪ್ರದೇಶದಲ್ಲಿ ನಡೆದಿದೆ.
ಅಂತ್ಯಕ್ರಿಯೆಗಾಗಿ ಬಂದಿದ್ದ ಸುಮಾರು 18 ಮಂದಿ ಮೃತಪಟ್ಟಿದ್ದು, 38 ಜನರನ್ನು ರಕ್ಷಿಸಲಾಗಿದೆ. ಘಟನೆಯ ವೇಳೆ 12ಕ್ಕೂ ಹೆಚ್ಚು ಜನ ಚಾವಡಿಯಲ್ಲಿ ಇದ್ದರು ಎನ್ನಲಾಗಿದ್ದು, ಅವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಘಟನೆಯ ವೇಳೆ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೇಲ್ಚಾವಣಿ ಕುಸಿತದ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿ, ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.