ಚೆನ್ನೈ : ದಿನೆ ದಿನೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು. ಹೆಣ್ಣುಮಕ್ಕಳು ಮನೆಯಿಂದ ದೇವಸ್ಥಾನಕ್ಕೆ ಹೋಗುವ ಮುನ್ನವೂ ಯೋಚಿಸುವಂತೆ ಮಾಡುತ್ತಿದೆ ಘಟನೆಗಳು.
ದೇವಸ್ಥಾನಕ್ಕೆ ಭೇಟಿ ನೀಡಿದ್ದ ಮಹಿಳೆಯ ಮೇಲೆ ಇಬ್ಬರು ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಮಿಳುನಾಡಿನ ನಾಗಪಟ್ಟಣಂನಲ್ಲಿ ನಡೆದಿದೆ . ಆಕೆ ಇಬ್ಬರು ಮಕ್ಕಳ ತಾಯಿ ಎಂದು ಹೇಳಲಾಗಿದ್ದು, ದುಷ್ಕೃತ್ಯ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎಲ್ಲೆಡೆ ದೇವಸ್ಥಾನದ ಅಂತಹ ಪವಿತ್ರ ಸ್ಥಳದಲ್ಲಿ ನಡೆದಿರುವ ಅತ್ಯಾಚಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಘಟನೆ ಖಂಡಿಸಿ ನಾಗಪಟ್ಟಣಂನಲ್ಲಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿವೆ.