ಮುಂಬೈ: ಮಹಾರಾಷ್ಟ್ರದ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಮಕ್ಕಳು ಸಾವನ್ನಪ್ಪಿರುವ ಘಟನೆಯು ಶನಿವಾರ ಬೆಳಗ್ಗೆ ನಡೆದಿದೆ.
ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿ ಈ ಘಟನೆಯು ನಡೆದಿದೆ. ಮುಂಜಾವಿನ 2 ಗಂಟೆಗೆ ಬೆಂಕಿ ಬಿದಿದ್ದು, ತೀವ್ರ ನಿಗಾ ವಿಭಾಗದಲ್ಲಿದ್ದ ಮಕ್ಕಳು ಸಜೀವ ದಹನವಾಗಿವೆ.
ಘಟನೆಯಲ್ಲಿ ಏಳು ಮಕ್ಕಳನ್ನು ರಕ್ಷಿಸಲಾಗಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಘಟನೆ ಬಗ್ಗೆ ಶೋಕ ವ್ಯಕ್ತಪಡಿಸಿದರು.