ಮುಂಬೈ : 19 ವರ್ಷದ ಮಾಡೆಲ್ ಯುವಕನ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮುಂಬೈ ಥಾಣೆಯಲ್ಲಿ ಸಂಭವಿಸಿದ.
ಗುಜರಾತ್ ನಲ್ಲಿ ಮಾಡೆಲ್ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಯುವಕ, ಚಿತ್ರರಂಗದಲ್ಲಿ ಅವಕಾಶ ಹುಡುಕುವ ದೃಷ್ಟಿಯಿಂದ ಮುಂಬೈಗೆ ಬಂದಿದ್ದಾಗ ಆತನಿಗೆ ಕೆಲಸ ಕೊಡಿಸುವುದಾಗಿ ಹೇಳಿ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ .
ಅಷ್ಟೇ ಅಲ್ಲದೆ ಕಾಮುಕರು ಈ ಘಟನೆಯ ವಿಡಿಯೋ ಮಾಡಿ ಹೊರಗೆ ಎಲ್ಲಾದರೂ ಹೇಳಿದ್ದಾರೆ ಅಥವಾ ಪೊಲೀಸರಲ್ಲಿ ದೂರು ದಾಖಲು ಮಾಡಿದರೆ ಸಾಮಾಜಿಕ ಜಾಲತಾಣದಲ್ಲಿ ರೇಪ್ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಲಾಗಿದ್ದು, ಸಂತ್ರಸ್ತ ಪೊಲೀಸರಿಗೆ ದೂರು ನೀಡಿದಾಗ ವಿಷಯ ಬಯಲಾಗಿದೆ.
ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದು, ಮೂವರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.