News Kannada
Monday, January 30 2023

ದೇಶ-ವಿದೇಶ

ಒಂಟಿಯಾಗಿ ಕಾರಿನಲ್ಲಿ ಓಡಾಡುವ ಸಂದರ್ಭದಲ್ಲಿ ಮಾಸ್ಕ್ ಅಗತ್ಯವಿಲ್ಲ

Photo Credit :

ಒಂಟಿಯಾಗಿ ಕಾರಿನಲ್ಲಿ ಓಡಾಡುವ ಸಂದರ್ಭದಲ್ಲಿ ಮಾಸ್ಕ್ ಅಗತ್ಯವಿಲ್ಲ

ನವದೆಹಲಿ: ಕಾರಿನಲ್ಲಿ ಒಂಟಿಯಾಗಿ ಓಡಾಡುವ ಸಂದರ್ಭದಲ್ಲಿ ಮಾಸ್ಕ್ ಧರಿಸುವ ಬಗ್ಗೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ತಮ್ಮ ಕಾರ್ ನಲ್ಲಿ ಒಂಟಿಯಾಗಿ ಓಡಾಡುವ ಸಂದರ್ಭದಲ್ಲಿ ಮಾಸ್ಕ್ ಧರಿಸದಿದ್ದಕ್ಕಾಗಿ 500 ರೂ. ದಂಡ ವಿಧಿಸಿರುವುದನ್ನು ವಿರೋಧಿಸಿ, ವಕೀಲರಾದ ಸುರಭ್ ಶರ್ಮಾ ಸಲ್ಲಿಸಿದ್ದ ಮನವಿ ಅರ್ಜಿಗೆ ಸಂಬಂಧಿಸಿ ಸರ್ಕಾರ ಅಫಿಡವಿಟ್ ಮೂಲಕ ಈ ಮಾಹಿತಿಯನ್ನು ಹಂಚಿಕೊಂಡಿದೆ.

ಅಷ್ಟೇ ಅಲ್ಲದೆ ಸಾರ್ವಜನಿಕವಾಗಿ ಮಾನಸಿಕ ಕಿರುಕುಳ ನೀಡಿದ್ದಕ್ಕಾಗಿ 10 ಲಕ್ಷ ರೂ. ಪರಿಹಾರವನ್ನು ಸುರಭ್‍ ಶರ್ಮಾ ಕೋರಿದ್ದಾರೆ. ಎಲ್ಲಾ ಸಾರ್ವಜನಿಕ ಸ್ಥಳಗಳು ಮತ್ತು ಕೆಲಸ ಮಾಡುವ ಸ್ಥಳಗಳಲ್ಲಿ ಮಾಸ್ಕ್ ಗಳನ್ನು ಧರಿಸುವುದು ಕಡ್ಡಾಯವಾಗಿದೆ.ಇದೇ ಅಂಶಗಳನ್ನು ಪ್ರಸ್ತಾಪಿಸಿರುವ ಸುರಭ್‍ ಶರ್ಮಾ ಅವರು, ಸಾರ್ವಜನಿಕ ಸ್ಥಳದಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಮಾಸ್ಕ್ ಧರಿಸಬೇಕು ಎಂದು ಮಾರ್ಗಸೂಚಿಗಳು ಹೇಳುತ್ತವೆ ಎಂದು ವಾದಿಸಿದ್ದಾರೆ.

ಅದರೊಂದಿಗೆ ದಂಡದ ಬಗ್ಗೆ ಪ್ರಸ್ತಾಪಿಸಿದ್ದು, ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಹೊರಡಿಸಲಾದ ದೆಹಲಿ ಸಾಂಕ್ರಾಮಿಕ ರೋಗಗಳ (ಕೋವಿಡ್ -19 ನಿರ್ವಹಣೆ) ನಿಯಂತ್ರಣದಂತೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಮೊದಲ ಬಾರಿಗೆ 500 ರೂ. ಪದೇ ಪದೇ ಉಲ್ಲಂಘಿಸಿದರೆ 1,000 ರೂ. ದಂಡ ವಿಧಿಸಲು ಅವಕಾಶವಿದೆ ಎಂದು ಉಲ್ಲೇಖಿಸಿದ್ದಾರೆ.

See also  ಇಸ್ತಾನ್ ಬುಲ್ ನೈಟ್ ಕ್ಲಬ್ ದಾಳಿ: 39 ಮಂದಿ ಸಾವು, 2 ಭಾರತೀಯರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು