News Kannada
Monday, September 26 2022

ದೇಶ-ವಿದೇಶ

ಬಿಜೆಪಿ ಸೆಲೆಬ್ರಿಟಿಗಳನ್ನು ಹೆದರಿಸುತ್ತದೆ: ಕಾಂಗ್ರೆಸ್ ಮುಖಂಡ ಸಚಿನ್ ಸಾವಂತ್ - 1 min read

Photo Credit :

ಬಿಜೆಪಿ ಸೆಲೆಬ್ರಿಟಿಗಳನ್ನು ಹೆದರಿಸುತ್ತದೆ: ಕಾಂಗ್ರೆಸ್ ಮುಖಂಡ ಸಚಿನ್ ಸಾವಂತ್

ಮುಂಬೈ: ಕೇಂದ್ರ ರೈತ ಕಾಯ್ದೆಯ ವಿರುದ್ಧ ಸೆಲೆಬ್ರಿಟಿಗಳು ಟ್ವೀಟ್ ಮಾಡುತ್ತಿರುವುದನ್ನು ಕುರಿತು ತನಿಖೆ ನಡೆಸುವಂತೆ ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶಮುಖ್ ಅವರು ಗುಪ್ತಚರ ಇಲಾಖೆಗೆ ಆದೇಶ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಚಿನ್ ಸಾವಂತ್ ಅವರು ಸೋಮವಾರ ತಿಳಿಸಿದ್ದಾರೆ.

“ರೈತರ ವಿಚಾರದ ಬಗ್ಗೆ ರಿಹಾನಾ ಟ್ವೀಟ್ ಮಾಡಿದ ನಂತರ ಕೇಂದ್ರ ಸರ್ಕಾರ ಕಾರ್ಯರೂಪಕ್ಕೆ ಬಂದಿತು. ನಂತರ ಸೆಲೆಬ್ರಿಟಿಗಳ ಸರಣಿ ಟ್ವೀಟ್‌ಗಳನ್ನು ಮಾಡಿದರು. ಒಬ್ಬ ಸೆಲೆಬ್ರಿಟಿ ಸ್ವತಃ ತಾನೇ ತನ್ನ ಅಭಿಪ್ರಾಯ ವ್ಯಕ್ತಪಡಿಸಿದರೆ ಉತ್ತಮ. ಆದರೆ ಸೆಲೆಬ್ರಿಟಿಗಳ ಒಂದೇ ರೀತಿಯ ಸರಣಿ ಟ್ವೀಟ್ ಅನುಮಾನಗಳನ್ನು ಹುಟ್ಟುಹಾಕುತ್ತಿದ್ದು, ಇದರ ಹಿಂದೆ ಬಿಜೆಪಿ ಕೈವಾಡ ಇದೆ ಅನಿಸುತ್ತಿದೆ. ಅಷ್ಟೇ ಅಲ್ಲದೆ, ಕೇಂದ್ರದ ಆಡಳಿತರೂಢ ಬಿಜೆಪಿ ರಾಷ್ಟ್ರೀಯ ಹೀರೋಗಳನ್ನು ಬೆದರಿಸುತ್ತಿದೆ” ಎಂದು ಸಚಿನ್ ಸಾವಂತ್ ಅವರು ಆರೋಪಿಸಿದ್ದಾರೆ.

ಈ ಕುರಿತಾಗಿ ನಾನು ಗೃಹ ಸಚಿವ ಅನಿಲ್ ದೇಶಮುಖ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಇದು ಗಂಭೀರ ವಿಚಾರ. ಒಂದು ವೇಳೆ ಬಿಜೆಪಿ ಸೆಲೆಬ್ರಿಟಿಗಳನ್ನು ಬೆದರಿಸುತ್ತಿದ್ದರೆ ಅವರಿಗೆ ಭದ್ರತೆ ಒದಗಿಸಬೇಕು. ಈ ಬಗ್ಗೆ ತನಿಖೆ ನಡೆಸಲು ಗುಪ್ತಚರ ಇಲಾಖೆಗೆ ಆದೇಶ ನೀಡಿದ್ದಾರೆ” ಎಂದು ಹೇಳಿದ್ದಾರೆ.

See also  ಐತಿಹಾಸಿಕ ದಾಖಲೆ ಬರೆದ ಪೆಟ್ರೋಲ್ ಬೆಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು