News Kannada
Thursday, October 06 2022

ದೇಶ-ವಿದೇಶ

ಫೆ. 22ರಂದು ಅಸ್ಸಾಂ ಹಾಗೂ ಪಶ್ಚಿಮಬಂಗಾಳ ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಿ - 1 min read

Photo Credit :

ಫೆ. 22ರಂದು ಅಸ್ಸಾಂ ಹಾಗೂ ಪಶ್ಚಿಮಬಂಗಾಳ ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಿ

ನವದೆಹಲಿ: ಅಸ್ಸಾಂ ಹಾಗೂ ಪಶ್ಚಿಮಬಂಗಾಳ ರಾಜ್ಯಗಳಿಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಹಸನ್ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಪ್ರಧಾನಿ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಅಂತೆಯೇ, ಅಸ್ಸಾಂನ ಸಿಲಾಪಥರ್‌ನಲ್ಲಿ ಪ್ರಮುಖ ಯೋಜನೆಯಾದ ತೈಲ ಹಾಗೂ ಗ್ಯಾಸ್‌ ಸೆಕ್ಟರ್‌ನ್ನು ಉದ್ಘಾಟಿಸಲಿದ್ದಾರೆ. ಇಂಡಿಯನ್‌ ಆಯಿಲ್‌ನ ಬೊಂಗೈಗಾಂವ್‌ ರಿಫೈನರಿಯ ಇಂಡ್‌ಮ್ಯಾಕ್ಸ್‌ ಘಟಕವಿದು. ಆಯಿಲ್‌ ಇಂಡಿಯಾ ಲಿಮಿಟೆಡ್‌ನ ಎರಡನೇ ಟ್ಯಾಂಕ್‌ ಫಾರ್ಮ್‌ ಇದು. ಬಳಿಕ ಹೆಬೆದ ಗ್ರಾಮದ ಟಿನ್ಸುಕಿಯ ಎಂಬಲ್ಲಿ ಗ್ಯಾಸ್ ಕಂಪ್ರೆಸರ್‌ ಸ್ಟೇಷನ್‌ ಉದ್ಘಾಟಿಸಲಿದ್ದಾರೆ. ಅಷ್ಟೇ ಅಲ್ಲದೆ ಇನ್ನೂ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ನಂತರ ಪಶ್ಚಿಮಬಂಗಾಳಕ್ಕೆ ತೆರಳಲಿರುವ ಪ್ರಧಾನಿ, ಅಲ್ಲಿನ ಹೂಗ್ಲಿಯಲ್ಲಿ ಅನೇಕ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಿ, ಹಾಗೆಯೇ ನೊಪಾರದಿಂದ ದಕ್ಷಿಣೇಶ್ವರ ವಿಸ್ತರಣಾ ಮೆಟ್ರೋ ಮಾರ್ಗದ ಸೇವೆಗೆ ಚಾಲನೆ ನೀಡಲಿದ್ದಾರೆ. ಅದರೊಂದಿಗೆ 4.1 ಕಿ.ಮೀ ಉದ್ದದ ಈ ಮಾರ್ಗವನ್ನು ₹464 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಸಂಪೂರ್ಣ ಕೇಂದ್ರ ಅನುದಾನದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ಸೋಮವಾರದ ಪ್ರಧಾನಿ ಭೇಟಿ ಗಳ ಬಗ್ಗೆ ಮಾಹಿತಿ ನೀಡಿದೆ. ‌

See also  ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ: ಎಚ್ಚರಿಕೆ ನೀಡಿದ ಅಧಿಕಾರಿಗಳು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು