News Kannada
Wednesday, October 05 2022

ದೇಶ-ವಿದೇಶ

ಕೊರೋನಾ ಅಪ್ಡೇಟ್; 24 ಗಂಟೆಯಲ್ಲಿ 13,742 ಮಂದಿಗೆ ಕೋವಿಡ್ ಸೋಂಕು, 104 ಮಂದಿ ಮೃತ - 1 min read

Photo Credit :

ಕೊರೋನಾ ಅಪ್ಡೇಟ್; 24 ಗಂಟೆಯಲ್ಲಿ 13,742 ಮಂದಿಗೆ ಕೋವಿಡ್ ಸೋಂಕು, 104 ಮಂದಿ ಮೃತ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 13,742 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. 104 ಮಂದಿ ಮೃತಪಟ್ಟಿದ್ದು, 14,037 ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕೊರೋನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ 5 ರಾಜ್ಯಗಳು ಕೊರೋನಾ ಸಂಬಂಧ ಹೊಸ ನಿರ್ಬಂಧಗಳನ್ನು ಹೇರಿದೆ. ಹಾಗೆಯೇ ವಿಮಾನ ನಿಲ್ದಾಣ ಮತ್ತು ಗಡಿ ಪ್ರದೇಶಗಳಲ್ಲಿ ಕೊರೋನಾ ಪರೀಕ್ಷೆ ಮಾಡುವುದನ್ನು ಕಡ್ಡಾಯ ಮಾಡಿದೆ.ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿತ್ತು. ಈ ನಿಟ್ಟಿನಲ್ಲಿ ಈ ಎರಡೂ ರಾಜ್ಯಗಳು ಕಠಿಣ ಲಾಕ್ಡೌನ್ ಜಾರಿ ಮಾಡಿದೆ. ಹಲವು ನಗರಗಳಲ್ಲಿ ಕರ್ಫ್ಯೂ ಕೂಡಾ ಜಾರಿ ಮಾಡಲಾಗಿದೆ.

ಉತ್ತರ ಪ್ರದೇಶ, ಮಧ್ಯ ಪ್ರದೇಶ, ಗುಜರಾತ್ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.ಕಳೆದ 15 ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಿಢೀರ್ ಏರಿಕೆಯಾಗಿದೆ. ಕರ್ನಾಟಕದಲ್ಲಿಯೂ ಕೇರಳ ಸಂಪರ್ಕಿಸುವ ಗಡಿಗಳಲ್ಲಿ ಕೊರೋನಾ ಪರೀಕ್ಷೆ ನಡೆಸಲಾಗುತ್ತಿದೆ. ಕೇರಳದಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ಇದರೊಂದಿಗೆ ಈವರೆಗೆ ಸೋಂಕಿತರಾದವರ ಸಂಖ್ಯೆ 1,10,30,176 ಆಗಿದೆ. ಈ ಪೈಕಿ 1,56,567 ಮಂದಿ ಮೃತಪಟ್ಟಿದ್ದು, 1,07,26,702 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 1,21,65,598 ಮಂದಿಗೆ ಕೋವಿಡ್-19 ವಿರುದ್ಧ ಲಸಿಕೆ ನೀಡಲಾಗಿದೆ. ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವ ಕಾರ್ಯಕ್ರಮ ದೇಶದೆಲ್ಲೆಡೆ ಚಾಲ್ತಿಯಲ್ಲಿದೆ. ಶೀಘ್ರದಲ್ಲೇ 50 ವರ್ಷಕ್ಕಿಂತ ಹೆಚ್ಚು ವಯಸ್ಸಾದವರಿಗೂ ಲಸಿಕೆ ನೀಡಿಕೆ ಆರಂಭವಾಗುವ ನಿರೀಕ್ಷೆ ಇದೆ.

See also  ಕೊಲಂಬೊ ತಲುಪಿದ ಆಕ್ಸಿಜೆನ್ ಹೊತ್ತ ಭಾರತೀಯ ನೌಕಾಪಡೆ ಟ್ಯಾಂಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು