News Kannada
Wednesday, October 05 2022

ದೇಶ-ವಿದೇಶ

ಮುಂಬಯಿ ಪ್ರಾದೇಶಿಕ ಸಮಿತಿಯ ಗೌರವ ಅಧ್ಯಕ್ಷರಾಗಿ ಬಿ. ವಿವೇಕ್ ಶೆಟ್ಟಿ - 1 min read

Photo Credit :

ಮುಂಬಯಿ ಪ್ರಾದೇಶಿಕ ಸಮಿತಿಯ ಗೌರವ ಅಧ್ಯಕ್ಷರಾಗಿ ಬಿ. ವಿವೇಕ್ ಶೆಟ್ಟಿ

ಮುಂಬಯಿ : ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗ ಮತ್ತು ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ (ಮಹಾರಾಷ್ಟ್ರ ಘಟಕ) 
ಒಡಿಯೂರು ಶ್ರೀಗಳವರ ಷಷ್ಥ್ಯಬ್ಧಿ ಸಂಭ್ರಮ ಆಚರಣೆಯ ನಿಮಿತ್ತ ನಡೆದ ಸಭೆಯಲ್ಲಿ, ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಬಿ. ವಿವೇಕ್ ಶೆಟ್ಟಿ ಇವರನ್ನು ಒಡಿಯೂರು ಶ್ರೀಗಳವರ ಷಷ್ಥ್ಯಬ್ಧಿ ಸಂಭ್ರಮದ ಮುಂಬಯಿ ಪ್ರಾದೇಶಿಕ ಸಮಿತಿಯ ಗೌರವ ಅಧ್ಯಕ್ಷರಾಗಿ, ಉದ್ಯಮಿ ವಾಮಯ್ಯ ಬಿ. ಶೆಟ್ಟಿಯವರನ್ನು ಅಧ್ಯಕ್ಷರನ್ನಾಗಿ, ಪ್ರಕಾಶ್ ಶೆಟ್ಟಿ ಪೇಟೆಮನೆ ಇವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ರವೀಂದ್ರ ಶೆಟ್ಟಿಯವರನ್ನು ಕೋಶಾಧಿಕಾರಿಯಾಗಿ ನೇಮಕ ಮಾಡಲಾಯಿತು.
 
ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕೃತಿಕ ಚೈತನ್ಯದ ಕುಸಿತಕ್ಕೆ ಒಳಗಾಗುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ ಎಂಬ ಮನದಿಚ್ಚೆಯನ್ನು ಹೊಂದಿರುವ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಕನಸನ್ನು ಸಾಕಾರಗೊಳಿಸುವ ಉದ್ದೇಶದಿಂದ ಧರ್ಮ, ಸಂಸ್ಕೃತಿ ಆಚರಣೆಯನ್ನೊಳಗೊಂಡ ಸಲಹಾ ಮತ್ತು ಸಾಂಸ್ಕೃತಿಕ ಸಮಿತಿಯನ್ನು ರಚಿಸಿ, ಶ್ರೀಗಳವರ ಷಷ್ಥ್ಯಬ್ಧಿ ಸಂಭ್ರಮವನ್ನು ಸಾಂಸ್ಕೃತಿಕ ಚೈತನ್ಯದ ಸಮಾರಂಭದಲ್ಲಿ ಆಚರಿಸುವುದೆಂದು ನಿರ್ಧರಿಸಲಾಯಿತು.
 
See also  ಆಂಧ್ರದ ನೂತನ ರಾಜ್ಯಪಾಲರಾಗಿ ಕಿರಣ್ ಬೇಡಿ ನೇಮಕವಾಗುತ್ತಾರ?
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು