ಕೋಲ್ಕತಾ: ಎಸ್‌ಎಸ್ ಕೆಎಂ ಆಸ್ಪತ್ರೆಗೆ ದಾಖಲಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಡಿಸ್ಚಾರ್ಜ್ ಆಗಿದ್ದಾರೆ.
ಎರಡು ದಿನಗಳ ಹಿಂದೆ ನಂದಿಗ್ರಾಮದಲ್ಲಿ ನಡೆದ ದಾಳಿಯಲ್ಲಿ ಗಾಯಗೊಂಡು ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ನೆನ್ನೆ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ವೀಲ್ ಚೇರ್ ನಲ್ಲಿಯೇ ದೀದಿ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ.
ಕಳೆದ ಬುಧವಾರ ನಂದಿಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಟಿಎಂಸಿ ಮುಖ್ಯಸ್ಥೆ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಲಾಗಿದ್ದು, ಘಟನೆಯಲ್ಲಿ ಮಮತಾ ಬ್ಯಾನರ್ಜಿ ಅವರ ಎಡಗಾಲಿನ ಹಿಮ್ಮಡಿ ಮತ್ತು ಬೆರಳುಗಳಿಗೆ ಗಂಭೀರ ಗಾಯಗಳಾಗಿದ್ದವು.