News Kannada
Friday, December 09 2022

ದೇಶ-ವಿದೇಶ

ಐದು ವರ್ಷದ ಮಗುವಿನ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ ಮರಣದಂಡನೆ ಶಿಕ್ಷೆ

Photo Credit :

ಐದು ವರ್ಷದ ಮಗುವಿನ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ ಮರಣದಂಡನೆ ಶಿಕ್ಷೆ

ಜೈಪುರ : ದೇಶದಲ್ಲಿ ದಿನೇದಿನೇ ಅತ್ಯಾಚಾರ ಪ್ರಕರಣಗಳು ಸಂಖ್ಯೆ ಹೆಚ್ಚುತ್ತಲೇ ಇದ್ದು ಅದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಶಿಕ್ಷೆಯನ್ನು ಹೆಚ್ಚಿಸಬೇಕು ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದೀಗ ಇಂತಹದೇ ಒಂದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.

ರಾಜಸ್ತಾನದಲ್ಲಿ ಐದು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿದ ಯುವಕನಿಗೆ ಪೋಕ್ಟೋ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಪ್ರಕರಣ ವರದಿಯಾದ 26 ದಿನಗಳಲ್ಲಿ ವಿಚಾರಣೆ ನಡೆಸಿ ನ್ಯಾಯಾಲಯ ಈ ತೀರ್ಪು ನೀಡಿದೆ .

ಫೆಬ್ರವರಿ 19 ರಂದು ಈ ಘಟನೆ ನಡೆದಿತ್ತು ಹಾಗೂ ಮಗುವನ್ನು ಅಪಹರಿಸಿದ ಯುವಕನೊಬ್ಬ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದ . ಬಳಿಕ ಮಗುವನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದ. ಬಳಿಕ ಆ ಸ್ಥಿತಿಯಲ್ಲಿ ಮಗುವನ್ನು ನೋಡಿದ ಕೆಲವು ಮಂದಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಈ ಕುರಿತು ಪ್ರಕರಣ ರಾಜಸ್ತಾನದ ಜುನ್ ಜುನ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ವರದಿಯಾಗಿತ್ತು. ಯುವಕನ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ , ಇದೀಗ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ ಅತ್ಯಾಚಾರಕ್ಕೊಳಗಾದ ಮಗುವಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಿದೆ ಎಂದು ವರದಿಗಳು ತಿಳಿಸುತ್ತವೆ.

See also  ಮದುವೆಯಾದ ನಾಲ್ಕೇ ದಿನಕ್ಕೆ ನವವಿವಾಹಿತೆ ಕೊರೊನಾಗೆ ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು