News Kannada
Tuesday, December 06 2022

ದೇಶ-ವಿದೇಶ

ಇನ್ನು ಆರೋಗ್ಯ ಕಾರ್ಯಕರ್ತರು ಕೋವಿಡ್‌ ಲಸಿಕೆ ಪಡೆಯಲು ಅವಕಾಶವಿಲ್ಲ ; ಕೇಂದ್ರ ಸರ್ಕಾರ

Photo Credit :

ಇನ್ನು  ಆರೋಗ್ಯ ಕಾರ್ಯಕರ್ತರು ಕೋವಿಡ್‌ ಲಸಿಕೆ ಪಡೆಯಲು ಅವಕಾಶವಿಲ್ಲ ; ಕೇಂದ್ರ ಸರ್ಕಾರ

ನವದೆಹಲಿ ; ಯಾವುದೇ ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್​ಲೈನ್ ವರ್ಕರ್ಸ್ ಕೋವಿಡ್ ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಅನೇಕ ಕಡೆ ಈ ವರ್ಗದ ಫಲಾನುಭವಿಗಳು ನಿಯಮಗಳನ್ನು ಮೀರುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದೆ. ಜನವರಿ 16ರಂದು ದೇಶದಾದ್ಯಂತ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡಲು ಆರಂಭಿಸಲಾಯ್ತು. ಫೆಬ್ರವರಿ 2ರಿಂದ ಫ್ರಂಟ್​​ಲೈನ್ ವರ್ಕರ್ಸ್ ಅಥವಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವ ಕಾರ್ಯಕ್ರಮ ಶುರುವಾಯಿತು. ಮಾರ್ಚ್ 1ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷಕ್ಕಿಂದ ಹೆಚ್ಚಿನ ಅನಾರೋಗ್ಯ ಪೀಡಿತರಿಗೆ ಲಸಿಕೆ ನೀಡಲು ಆರಂಭಿಸಲಾಯಿತು.
ಸರ್ಕಾರದ ನಿರ್ಧಾರದ ಬಗ್ಗೆ ವಿವರಿಸಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಮೊದಲು ಲಸಿಕೆ ನೀಡಲಾಯಿತು. ಲಸಿಕೆ ಪಡೆಯಲು ನೋಂದಣಿ ದಿನಾಂಕವನ್ನು ಈಗಾಗಲೇ ಅನೇಕ ಬಾರಿ ಮುಂದೂಡಲಾಗಿದೆ. ನಂತರ ಫೆಬ್ರವರಿ 25ರಂದು ಆರೋಗ್ಯ ಕಾರ್ಯಕರ್ತರಿಗೆ ಮತ್ತು ಮಾರ್ಚ್ 6ರಂದು ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆಗಾಗಿ ನೋಂದಣಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಎಂದು ತಿಳಿಸಲಾಗಿತ್ತು. ಇಷ್ಟೆಲ್ಲಾ ಆಗಿ ಒಂದು ತಿಂಗಳು ಕಳೆದಿದೆ. ಈ ನಡುವೆ 60 ವರ್ಷಕ್ಕಿಂತ ಹೆಚ್ಚಿನವರಿಗೆ ಲಸಿಕೆ ನೀಡುವ ಸಂದರ್ಭದಲ್ಲೂ ಈ ಎರಡು ವರ್ಗಕ್ಕೆ ನೋಂದಣಿ ಮಾಡಿಸಿಕೊಳ್ಳುವ ಅವಕಾಶ ನೀಡಲಾಗಿತ್ತು.
ಈ ನಡುವೆ ದೇಶದ ನಾನಾ ಮೂಲೆಗಳಿಂದ ಲಸಿಕೆಯ ದುರುಪಯೋಗವಾಗುತ್ತಿರುವ ಕುರಿತು ಮಾಹಿತಿ ಬಂದಿದೆ. ಅನೇಕ ಲಸಿಕಾ ಕೇಂದ್ರಗಳಲ್ಲಿ ಅನರ್ಹ ವ್ಯಕ್ತಿಗಳು ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರ ಸೋಗಿನಲ್ಲಿ ಲಸಿಕೆ ಪಡೆದಿರುವುದು ಗಮನಕ್ಕೆ ಬಂದಿದ್ದು ಇದು ಸಂಪೂರ್ಣವಾಗಿ ನಿಯಮಬಾಹಿರವಾಗಿದೆ ಎಂದು ರಾಜೇಶ್ ಭೂಷಣ್ ಹೇಳಿದ್ದಾರೆ.ಕಳೆದ ಕೆಲವು ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರ ನೋಂದಣಿ ಸಂಖ್ಯೆಯಲ್ಲಿ ಧಿಡೀರನೆ ಶೇಕಡಾ 24ರಷ್ಟು ಹೆಚ್ಚಳ ಕಂಡುಬಂದಿದೆ. ಈ ಸಂಬಂಧ ತಜ್ಞರ ಸಭೆಯಲ್ಲಿ ಚರ್ಚಿಸಿದಾಗ ನಾನಾ ರಾಜ್ಯಗಳಲ್ಲಿ ನಡೆಯುತ್ತಿರುವ ನಿಯಮಬಾಹಿರ ಪ್ರಕರಣಗಳು ಬೆಳಕಿಗೆ ಬಂದವು. ಆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಈಗಾಗಲೇ ನೋಂದಣಿ ಮಾಡಿಸಿಕೊಂಡಿರುವ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಯಾವುದೇ ಸಮಸ್ಯೆ ಇಲ್ಲದೆ ಲಸಿಕೆ ದೊರೆಯಲಿದೆ. ಜೊತೆಗೆ 45 ವರ್ಷಕ್ಕಿಂದ ಮೇಲ್ಪಟ್ಟ ಎಲ್ಲರಿಗೂ ಈಗಿನಂತೆಯೇ ಲಸಿಕಾ ಕಾರ್ಯಕ್ರಮ ಮುಂದುವರೆಯಲಿದೆ ಎಂದು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

See also  ‘ಜತೆಗಿರುವ ಶತ್ರು’ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿರುಗೇಟು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು