News Kannada
Tuesday, November 29 2022

ದೇಶ-ವಿದೇಶ

ಲಾಕ್‌ಡೌನ್ ಭೀತಿ; ಮತ್ತೆ ಊರಿನತ್ತ ಗಂಟುಮೂಟೆ ಕಟ್ಟುತ್ತಿರುವ ಕಾರ್ಮಿಕರು - 1 min read

Photo Credit :

ಲಾಕ್‌ಡೌನ್ ಭೀತಿ; ಮತ್ತೆ ಊರಿನತ್ತ ಗಂಟುಮೂಟೆ ಕಟ್ಟುತ್ತಿರುವ ಕಾರ್ಮಿಕರು

ಮುಂಬೈ, ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಭಾನುವಾರ ರಾತ್ರಿ ರಾಜ್ಯದಲ್ಲಿ ಕಠಿಣ ನಿರ್ಬಂಧಗಳನ್ನು ಹೇರಲಾಗಿದೆ. ಭಾನುವಾರ ಒಂದೇ ದಿನ ರಾಜ್ಯದಲ್ಲಿ 57074 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸದ್ಯಕ್ಕೆ ವಾರಂತ್ಯದ ಲಾಕ್‌ಡೌನ್ ಘೋಷಿಸಲಾಗಿದೆ. ಈ ಬೆಳವಣಿಗೆಯಿಂದ ಆತಂಕಗೊಂಡಿರುವ ವಲಸೆ ಕಾರ್ಮಿಕರು ಮತ್ತೆ ತಮ್ಮ ಊರುಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಕಳೆದ ವರ್ಷದಂತೆ ಈ ವರ್ಷವೂ ಲಾಕ್‌ಡೌನ್ ಆಗಿ ಮತ್ತೆ ಸಂಕಷ್ಟಕ್ಕೆ ಸಿಲುಕಬಹುದು ಎಂಬ ಭೀತಿಯಿಂದ ಈಗಲೇ ಮನೆಗಳಿಗೆ ವಾಪಸ್ಸಾಗುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಕಾರ್ಮಿಕರು ತಮ್ಮ ಊರುಗಳಿಗೆ ಮರಳುತ್ತಿರುವ ದೃಶ್ಯ ರಾಜ್ಯದಲ್ಲಿ ಕಂಡುಬರುತ್ತಿದೆ.
ಭಾನುವಾರ ರಾತ್ರಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕೊರೊನಾ ನಿಯಂತ್ರಣಕ್ಕೆ ಕೆಲವು ಕಠಿಣ ನಿಯಮಗಳನ್ನು ಘೋಷಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ರೈಲು ಸೇವೆಯನ್ನು ಸ್ಥಗಿತಗೊಳಿಸುವ ಎಲ್ಲಾ ಸಾಧ್ಯತೆಗಳಿದ್ದು, ಎಷ್ಟು ಸಾಧ್ಯವೋ ಅಷ್ಟು ಬೇಗ ಊರಿಗೆ ಮರಳುವುದು ಸೂಕ್ತ ಎಂದು ಕೆಲವು ಕಾರ್ಮಿಕರು ಹೇಳುತ್ತಿದ್ದಾರೆ. ಕಳೆದ ವರ್ಷವೂ ಬಿಹಾರ, ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಕಾರ್ಮಿಕರು ಮಹಾರಾಷ್ಟ್ರದಿಂದ ವಾಪಸ್ ಮರಳಲು ಕಾಲು ಹಾದಿ ಹಿಡಿದಿದ್ದರು. ಎರಡು ದಿನಗಳಿಂದಲೂ ಉತ್ತರ ಪ್ರದೇಶ ಹಾಗೂ ಬಿಹಾರದ ಕಡೆಗೆ ಹೋಗುವ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ನಿರ್ಬಂಧಗಳನ್ನು ಉದ್ಧವ್ ಠಾಕ್ರೆ ಭಾನುವಾರ ರಾತ್ರಿ ಘೋಷಣೆ ಮಾಡುತ್ತಿದ್ದಂತೆಯೇ ರೈಲುಗಳಿಗೆ ಬುಕ್ಕಿಂಗ್ ಮಾಡುವುದು ಹೆಚ್ಚಾಗಿದೆ. ಭಾನುವಾರ ಬೇರೆ ರಾಜ್ಯಗಳಿಗೆ ತೆರಳುವ ಕಾರ್ಮಿಕರ ಸಂಖ್ಯೆಯೂ ಏಕಾಏಕಿ ಹೆಚ್ಚಾಗಿದ್ದಾರೆ ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ಲಾಕ್‌ಡೌನ್ ಜಾರಿಯಾಗಿ ಜೌನ್‌ಪುರದಲ್ಲಿನ ಮನೆ ತಲುಪಲು ನಡೆದುಕೊಂಡೇ ಹೋಗಬೇಕಾಯಿತು. ಈಗ ಮತ್ತೆ ಅಂಥ ಪರಿಸ್ಥಿತಿಯಲ್ಲಿ ಸಿಲುಕಲು ಇಷ್ಟವಿಲ್ಲ. ಸರ್ಕಾರ ಹೊಸ ಹೊಸ ನಿರ್ಬಂಧಗಳನ್ನು ಹೇರುತ್ತಿದೆ. ಹೀಗಾಗಿ ರೈಲುಗಳನ್ನು ನಿಲ್ಲಿಸುವ ಮುನ್ನ ಊರು ಸೇರಬೇಕೆಂದು ಹೊರಟಿದ್ದೇನೆ” ಎಂದು ಸಿಮೆಂಟ್ ವಾಹನ ಚಾಲಕ ಸೋನು ಪಟೇಲ್ ಹೇಳಿದ್ದಾರೆ. ಇವರಂತೆಯೇ ಸಾವಿರಾರು ಕಾರ್ಮಿಕರು ಗಂಟು ಮೂಟೆ ಕಟ್ಟಿಕೊಂಡು ರಾಜ್ಯ ಬಿಡುತ್ತಿದ್ದಾರೆ.

See also  ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣ: ಪ್ರಗತಿಪರರ ಗೃಹಬಂಧನ ಅವಧಿ ವಿಸ್ತರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು