News Kannada
Tuesday, December 06 2022

ದೇಶ-ವಿದೇಶ

ಬಾಲಕಿ ಮೇಲೆ ಅತ್ಯಾಚಾರ: ಪೊಲೀಸ್‌ ಸೇರಿ ನಾಲ್ವರ ಬಂಧನ

Photo Credit :

ಬಾಲಕಿ ಮೇಲೆ ಅತ್ಯಾಚಾರ: ಪೊಲೀಸ್‌ ಸೇರಿ ನಾಲ್ವರ ಬಂಧನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಮತ್ತು ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ‘ಮಹಿಳೆಯೊಬ್ಬರ ನೆರವಿನಿಂದ ಬೊನಿಗಾಮ್ ಖಾಜಿಗುಂಡ್‌ನಲ್ಲಿ ತನ್ನ ಮಗಳ ಮೇಲೆ ಮೂವರು ಅತ್ಯಾಚಾರವೆಸಗಿದ್ದಾರೆ‘ ಎಂದು ಖಾಜಿಗುಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
‘ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಆಕೆ ಗರ್ಭಿಣಿಯಾಗಿದ್ದಾಗಿ ತಿಳಿದುಬಂತು. ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂತು’ ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸ್ ಇಲಾಖೆ ವಕ್ತಾರರು ತಿಳಿಸಿದ್ದಾರೆ. ಆರೋಪಿಗಳನ್ನು ಝಹೂರ್ ಅಹ್ಮದ್‌ ಮಿರ್‌, ಏಜಾಜ್‌ ಅಹ್ಮದ್ ಶಾ, ಕಿಫಾಯತ್ ಅಹ್ಮದ್‌ ಮಲಿಕ್‌ ಮತ್ತು ಶಬ್ರೂಝಾ ಎಂದು ಗುರುತಿಸಲಾಗಿದೆ. ಈ ಮೂವರಲ್ಲಿ ಪೊಲೀಸ್ ಇಲಾಖೆಗೆ ಸೇರಿದವರು ಯಾರು ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಪೊಲೀಸ್ ಕಾನ್‌ಸ್ಟೆಬಲ್ ಅತ್ಯಾಚಾರ ನಡೆದ ಸಮಯದಲ್ಲಿ ಕರ್ತವ್ಯ ಮೇಲೆ ಇರಲಿಲ್ಲ. ಪೊಲೀಸ್ ಕಾನ್‌ಸ್ಟೆಬಲ್ ವಿರುದ್ಧ ಇಲಾಖಾ ತನಿಖೆ ನಡೆಸಲಾಗುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

See also  ನೇಪಾಳದಿಂದ ಭಾರತಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಗುರುತು ಚೀಟಿ ಕಡ್ಡಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು