News Kannada
Monday, December 05 2022

ದೇಶ-ವಿದೇಶ

ಕುಂಭಮೇಳಕ್ಕೆ ಜಮಾಯಿಸಿದ ಲಕ್ಷಾಂತರ ಜನ; ಎರಡೇ ದಿನದಲ್ಲಿ ಕೊರೊನಾ ಏರಿಕೆ

Photo Credit :

ಕುಂಭಮೇಳಕ್ಕೆ ಜಮಾಯಿಸಿದ ಲಕ್ಷಾಂತರ ಜನ; ಎರಡೇ ದಿನದಲ್ಲಿ ಕೊರೊನಾ ಏರಿಕೆ

ನವದೆಹಲಿ, : ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಕೊರೊನಾ ಪ್ರಕರಣಗಳಲ್ಲಿ ಭಾರೀ ಏರಿಕೆಯಾಗಿದೆ. ದಿನನಿತ್ಯದ ಕೊರೊನಾ ಪ್ರಕರಣಗಳು ಒಂದೂವರೆ ಲಕ್ಷದ ಗಡಿಯನ್ನು ದಾಟಿದೆ. ಈ ನಡುವೆ ಉತ್ತರಾಖಂಡದ ಹರಿದ್ವಾರದಲ್ಲಿ ಕುಂಭಮೇಳ ನಡೆಯುತ್ತಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದಾರೆ. ಜೊತೆಗೆ ಹರಿದ್ವಾರದಲ್ಲಿ ಕೊರೊನಾ ಪ್ರಕರಣಗಳಲ್ಲೂ ಏರಿಕೆ ಕಂಡುಬಂದಿರುವುದು ಆತಂಕ ಮೂಡಿಸಿದೆ.
ಮಂಗಳವಾರ ಹರಿದ್ವಾರದಲ್ಲಿ 594 ಹೊಸ ಪ್ರಕರಣಗಳು ದಾಖಲಾಗಿವೆ. ಮಹಾಕುಂಭದ 13ನೇ ದಿನ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಸೋಮವಾರ ಗಂಗಾ ಸ್ನಾನ ಮಾಡಿದ್ದಾರೆ. ಈ ಬೆನ್ನಲ್ಲೇ ನಗರದಲ್ಲಿ ಕೊರೊನಾ ಪ್ರಕರಣಗಳು ದಿಢೀರ್ ಏರಿಕೆಯಾಗಿವೆ. ಸೋಮವಾರ ಹರಿದ್ವಾರದಲ್ಲಿ 408 ಹೊಸ ಕೊರೊನಾ ಪ್ರಕರಣಗಳು ಕಂಡುಬಂದಿದ್ದರೆ, ಮಂಗಳವಾರ ಈ ಸಂಖ್ಯೆ 594ಕ್ಕೆ ಏರಿಕೆಯಾಗಿದೆ. ಉತ್ತರಾಖಂಡದಲ್ಲಿ ಕಳೆದ 24 ಗಂಟೆಗಳಲ್ಲಿ 1925 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 13 ಸಾವು ಸಂಭವಿಸಿದೆ.
ಸೋಮವಾರ ಶಾಹಿ ಸ್ನಾನದಲ್ಲಿ ಕೇಂದ್ರದ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಭಕ್ತರು ಲಕ್ಷಾಂತರ ಭಾಗವಹಿಸಿದ್ದರು. ಮಾಸ್ಕ್‌ ಧರಿಸದೇ, ಸಾಮಾಜಿಕ ಅಂತರವನ್ನೂ ಪಾಲಿಸದೇ ಇರುವುದು ಕಂಡುಬಂದಿದೆ. ಹರ್ ಕೀ ಪೌರ್ ಘಾಟ್ ಬಳಿ ಸಾವಿರಾರು ಭಕ್ತರು ಶಾಹಿ ಸ್ನಾನ್(ಪುಣ್ಯ ಸ್ನಾನ) ಸಂದರ್ಭ ಕೊರೊನಾ ಸೋಂಕಿನ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕೊರೊನಾವೈರಸ್ ಹರಡುವಿಕೆಗೆ ಕಡಿವಾಣ ಹಾಕುವ ಉದ್ದೇಶದಿಂದ, ಕುಂಭಮೇಳಕ್ಕೆ ಆಗಮಿಸುವ ಭಕ್ತರು ಮತ್ತು ಪ್ರವಾಸಿಗರು 72 ಗಂಟೆಗಳಿಗೂ ಮೊದಲು ಕೊವಿಡ್-19 ಪರೀಕ್ಷೆಗೆ ಒಳಪಟ್ಟು ನೆಗೆಟಿವ್ ವರದಿ ಹೊಂದಿರಬೇಕು ಎಂದು ಉತ್ತರಾಖಂಡ್ ಹೈಕೋರ್ಟ್ ಮೊದಲೇ ಆದೇಶ ನೀಡಿದೆ. ಈ ಎಲ್ಲಾ ಕ್ರಮಗಳ ನಡುವೆಯೂ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ.
12 ವರ್ಷಗಳಿಗೆ ಒಂದು ಬಾರಿ ನಡೆಯುವ ಕುಂಭಮೇಳ ಸಾಮಾನ್ಯವಾಗಿ 4 ತಿಂಗಳವರೆಗೆ ನಡೆಯುತ್ತದೆ. ಆದರೆ ಕೊರೊನಾ ಸಾಂಕ್ರಾಮಿಕದ ಹಿನ್ನೆಲೆ ಏಪ್ರಿಲ್ 1 ರಿಂದ 30ರವರೆಗೆ ಮಾತ್ರ ಕುಂಭಮೇಳ ನಡೆಸುವುದಕ್ಕೆ ಅನುಮತಿ ನೀಡಲಾಗಿದೆ.

See also  ಬೆಂಗಳೂರಲ್ಲಿ ಜೂನ್ 7ರಿಂದ ಬಿಎಂಟಿಸಿ ಬಸ್ ಸಂಚಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು