News Kannada
Sunday, November 27 2022

ದೇಶ-ವಿದೇಶ

ಬ್ರೆಜಿಲ್: ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 3462 ಮಂದಿ ಸಾವು! - 1 min read

Photo Credit :

ಬ್ರೆಜಿಲ್: ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 3462 ಮಂದಿ ಸಾವು!

ನವದೆಹಲಿ, : ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯ ಹೊಡೆತಕ್ಕೆ ಇಡೀ ಜಗತ್ತು ತತ್ತರಿಸಿ ಹೋಗಿದೆ. ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಜಗತ್ತಿನ 2ನೇ ರಾಷ್ಟ್ರವಾಗಿರುವ ಭಾರತದಲ್ಲಿ ಇದೀಗ ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ.ಕೊರೊನಾವೈರಸ್ ಹೊಸ ಪ್ರಕರಣಗಳ ಮಧ್ಯೆ ಮಹಾಮಾರಿಗೆ ಅತಿಹೆಚ್ಚು ಸಾವಿನ ಪ್ರಕರಣಗಳು ಬ್ರೆಜಿಲ್ ರಾಷ್ಟ್ರದಲ್ಲಿ ಪತ್ತೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ಜಗತ್ತಿನಲ್ಲೇ ಅತಿಹೆಚ್ಚು ಕೊವಿಡ್-19 ಸಾವಿನ ಪ್ರಕರಣಗಳು ಇದೊಂದೇ ರಾಷ್ಟ್ರದಲ್ಲಿ ವರದಿಯಾಗಿವೆ.
ಒಂದೇ ದಿನದಲ್ಲಿ ಕೊವಿಡ್-19 ಸೋಂಕಿನಿಂದ 3462 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 3,62,180ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 75998 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,36,77,564ಕ್ಕೆ ಏರಿಕೆಯಾಗಿದೆ. 1,21,70,771 ಸೋಂಕಿತರು ಗುಣಮುಖರಾಗಿದ್ದು, 11,44,613 ಸಕ್ರಿಯ ಪ್ರಕರಣಗಳು ವರದಿಯಾಗಿದೆ.
ವಿಶ್ವದಲ್ಲಿ ಒಂದೇ ದಿನ ಒಟ್ಟು 8,03,194 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 13,88,20,166ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 13513 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 29,84,901ಕ್ಕೆ ಏರಿಕೆಯಾಗಿದೆ. ಈವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 11,16,05,220 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,42,30,045 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

See also  ಕಲಬೆರಕೆ ಮದ್ಯ ಸೇವನೆ: ಮೃತರ ಸಂಖ್ಯೆ 80ಕ್ಕೆ ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು