News Kannada
Sunday, December 04 2022

ದೇಶ-ವಿದೇಶ

ಕೇಂದ್ರ ಸರಕಾರವನ್ನು ತುಘ್ಲಿಕಿ ಸರಕಾರ ಎಂದ ರಾಹುಲ್ ಗಾಂಧಿ

Photo Credit :

ಕೇಂದ್ರ ಸರಕಾರವನ್ನು ತುಘ್ಲಿಕಿ ಸರಕಾರ ಎಂದ ರಾಹುಲ್ ಗಾಂಧಿ

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆ ಹಾಗೂ ಲಸಿಕೆಗಳ ಕೊರತೆ ಕುರಿತು ಕೇಂದ್ರ ಸರ್ಕಾರವನ್ನು ಟೀಕಿಸಿದ್ದ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ, ಕೊರೊನಾ ಪರಿಸ್ಥಿತಿ ನಿರ್ವಹಣೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕಾರ್ಯಸೂಚಿ ಬಗ್ಗೆ ಟೀಕಿಸಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

 

ಕೊರೊನಾ ನಿಯಂತ್ರಣ ಕಾರ್ಯಸೂಚಿಗಳನ್ನು ಕೇಂದ್ರ ಸರ್ಕಾರ ವೈಜ್ಞಾನಿಕವಾಗಿ ಹಾಗೂ ಸಮಗ್ರವಾಗಿ ರೂಪಿಸುತ್ತಿಲ್ಲ. ಬೇಕಾಬಿಟ್ಟಿ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರವನ್ನುದ್ದೇಶಿಸಿ ಟ್ವೀಟ್ ಮಾಡಿರುವ ಅವರು, “ಮೊದಲ ಹಂತದಲ್ಲಿ ತುಘ್ಲಿಕಿ ಲಾಕ್‌ಡೌನ್ ಹೇರುವುದು, ಎರಡನೇ ಹಂತದಲ್ಲಿ ಗಂಟೆ ಬಾರಿಸುವುದು, ಮೂರನೇ ಹಂತದಲ್ಲಿ ದೇವರಿಗೆ ಪ್ರಾರ್ಥಿಸಿ ಹಾಡು ಹಾಡುವುದು ಸರ್ಕಾರದ ಕಾರ್ಯತಂತ್ರಗಳಾಗಿವೆ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

 

ಇತ್ತೀಚಿಗಷ್ಟೇ ನಡೆದ ಟೀಕಾ ಉತ್ಸವದ ಕುರಿತೂ ರಾಹುಲ್ ಗಾಂಧಿ ಟೀಕಿಸಿದ್ದರು. ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ, ಆಮ್ಲಜನಕವಿಲ್ಲ. ಆದರೆ ಲಸಿಕೆಯನ್ನು ಉತ್ಸವವೆನ್ನುತ್ತಿದ್ದಾರೆ ಎಂದು ಖಂಡಿಸಿದ್ದರು. ಪ್ರಧಾನಿ ಮೋದಿಗೆ ಪತ್ರ ಬರೆದು, ಲಸಿಕಾ ಕಾರ್ಯಕ್ರಮದ ಹಿನ್ನಡೆಯ ಬಗ್ಗೆ ಉಲ್ಲೇಖಿಸಿದ್ದರು.

See also  ಪೆಟ್ರೋಲ್, ಡೀಸೆಲ್ ಬೆಲೆಗೆ ಬೆಂಕಿ: 90ರ ಗಡಿದಾಟಿ ದಾಖಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು