News Kannada
Saturday, December 03 2022

ದೇಶ-ವಿದೇಶ

ರಾಯ್ಪುರ್ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ, 5 ಮಂದಿ ಸಜೀವದಹನ

Photo Credit :

ರಾಯ್ಪುರ್ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ, 5 ಮಂದಿ ಸಜೀವದಹನ

ರಾಯ್ಪುರ್, : ಛತ್ತೀಸ್‌ಗಢದ ರಾಯ್ಪುರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 5 ಮಂದಿ ಸಜೀವ ದಹನವಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಧಾವಿಸಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ದುರಂತದಲ್ಲಿ ಐದು ಮಂದಿ ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ.ಆಸ್ಪತ್ರೆಯ ಇತರೆ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತರ್ಕೇಶ್ವರ ಪಟೇಲ್ ತಿಳಿಸಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ, ಆಸ್ಪತ್ರೆ ಸಿಬ್ಬಂದಿಗಳ ಬಳಿ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಬೆಂಕಿಯನ್ನು ಹಿಡಿತಕ್ಕೆ ತರಲು ಸುಮಾರು 25 ಗಂಟೆಗಳ ಕಾಲ ಸತತ ಪ್ರಯತ್ನ ಮಾಡಬೇಕಾಯಿತು. ಆಸ್ಪತ್ರೆಯಲ್ಲಿ 34 ಮಂದಿ ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬುದು ತಿಳಿದುಬಂದಿದೆ. ಮುಖ್ಯಮತ್ರಿ ಭೂಪೇಶ್ ಮೃತರ ಕುಟುಂಬಕ್ಕೆ 4 ಲಕ್ಷರೂ ಪರಿಹಾರ ಘೋಷಿಸಿದ್ದಾರೆ.

See also  ಕನ್ಹಯ್ಯಾ ಕುಮಾರ್ ವಿರುದ್ಧ 1200 ಪುಟಗಳ ಚಾರ್ಜ್ ಶೀಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು