News Kannada
Tuesday, November 29 2022

ದೇಶ-ವಿದೇಶ

5 ಜಿಲ್ಲೆಗಳಿಗೆ ಲಾಕ್‌ಡೌನ್: ಹೈಕೋರ್ಟ್ ಆದೇಶ ನಿರಾಕರಿಸಿದ ಸಿಎಂ ಯೋಗಿ - 1 min read

Photo Credit :

5 ಜಿಲ್ಲೆಗಳಿಗೆ ಲಾಕ್‌ಡೌನ್: ಹೈಕೋರ್ಟ್ ಆದೇಶ ನಿರಾಕರಿಸಿದ ಸಿಎಂ ಯೋಗಿ

ಅಲಹಾಬಾದ್, : ಉತ್ತರ ಪ್ರದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಾರದವರೆಗೆ ಲಾಕ್‌ಡೌನ್ ವಿಧಿಸುವಂತೆ ಅಲಹಾಬಾದ್ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು.ಆದರೆ, ಈ ಆದೇಶಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಸರ್ಕಾರ ಸದ್ಯಕ್ಕೆ ಆ ಐದು ನಗರಗಳಲ್ಲಿ ಯಾವುದೇ ರೀತಿಯ ಲಾಕ್‌ಡೌನ್ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದೆ. ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಖನೌ, ಅಲಹಾಬಾದ್, ಕಾನ್ಪುರ್, ವಾರಾಣಸಿ ಮತ್ತು ಗೋರಖ್‌ಪುರದಲ್ಲಿ ಒಂದು ವಾರದವರೆಗೆ ಲಾಕ್‌ಡೌನ್ ವಿಧಿಸುವಂತೆ ಸೂಚನೆ ನೀಡಲಾಗಿತ್ತು.
ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಅವಶ್ಯಕವಾಗಿದೆ. ಈಗಾಗಲೇ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು ಮುಂದೆಯೂ ಕಠಿಣ ನಿಯಮಗಳನ್ನು ತರಲಾಗುವುದು. ಜೀವ ಉಳಿಸುವುದರ ಜೊತೆಗೆ ಜೀವವನ್ನು ಕಾಪಾಡಬೇಕು. ಇಂತಹ ಸಂದರ್ಭದಲ್ಲಿ ಇಡೀ ನಗರವನ್ನು ಲಾಕ್ ಡೌನ್ ಮಾಡಿದರೆ ಜೀವನ ನಿರ್ವಹಣೆ ಕಷ್ಟ ಆಗಲಿದೆ. ಜನರು ಸಹ ಸ್ವಯಂ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ರಾಜ್ಯದಲ್ಲಿನ ಕ್ವಾರಂಟೈನ್ ಕೇಂದ್ರಗಳ ಸ್ಥಿತಿ ಹಾಗೂ ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುವ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ ವರ್ಮಾ ಮತ್ತು ಅಜಿತ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಐದು ನಗರಗಳಲ್ಲಿ ಲಾಕ್‌ಡೌನ್‌ಗೆ ಆದೇಶಿಸಿತ್ತು.

See also  ಭಾರೀ ಗಾತ್ರದ ಫ್ಲೆಕ್ಸ್ ಬ್ಯಾನರ್ ಕುಸಿದುಬಿದ್ದು ಮೂವರ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು