News Kannada
Tuesday, December 06 2022

ದೇಶ-ವಿದೇಶ

ಕೊರೊನಾ ಸೋಂಕು ಹೆಚ್ಚಳ: ಐಸಿಎಸ್‌ಇ 10ನೇ ತರಗತಿ ಪರೀಕ್ಷೆ ರದ್ದು

Photo Credit :

ಕೊರೊನಾ ಸೋಂಕು ಹೆಚ್ಚಳ: ಐಸಿಎಸ್‌ಇ 10ನೇ ತರಗತಿ ಪರೀಕ್ಷೆ ರದ್ದು

ನವದೆಹಲಿ, : ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್(ಐಸಿಎಸ್‌ಇ) 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.ಇನ್ನು ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ಈ ಹಿಂದಿನ ಆದೇಶದಂತೆ ನಡೆಯಲಿದ್ದು, ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಕಳೆದ ಮೂರು ದಿನಗಳ ಹಿಂದಷ್ಟೇ ಐಸಿಎಸ್‌ಇ 10 ಹಾಗೂ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ಈ ವಾರದ ಆರಂಭದಲ್ಲಿ, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ತನ್ನ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿ 12 ನೇ ತರಗತಿ ಪರೀಕ್ಷೆಯನ್ನು ಮುಂದೂಡಿದೆ. ಹಲವಾರು ರಾಜ್ಯ ಮಂಡಳಿಗಳು ಕೂಡಾ ಪರೀಕ್ಷೆಗಳನ್ನು ಮುಂದೂಡಿವೆ ಅಥವಾ ರದ್ದುಗೊಳಿಸಿವೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತೇವೆ ಮತ್ತು ಜೂನ್ ಮೊದಲ ವಾರದಲ್ಲಿ ಪರಿಶೀಲನೆ ನಡೆಸಿ, ಪರೀಕ್ಷೆ ನಡೆಸುವ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
12ನೇ ತರಗತಿ ಪರೀಕ್ಷೆಗಳನ್ನು ನಂತರದ ಹಂತದಲ್ಲಿ ನಡೆಸಲಾಗುವುದು, 10ನೇ ತರಗತಿಯ ವಿದ್ಯಾರ್ಥಿಗಳು ತದನಂತರ ಆಫ್‌ಲೈನ್ ಪರೀಕ್ಷೆಗಳಲ್ಲಿ ಹಾಜರಾಗಲು ಅಥವಾ ಮಂಡಳಿಯಿಂದ ಅಭಿವೃದ್ಧಿಪಡಿಸಿದ ನ್ಯಾಯಯುತ ಮತ್ತು ಪಕ್ಷಪಾತವಿಲ್ಲದ ಮಾನದಂಡಗಳ ಆಧಾರದ ಮೇಲೆ ಮೌಲ್ಯಮಾಪನ ಪಡೆಯುವ ಆಯ್ಕೆಯನ್ನು ಪಡೆಯುತ್ತಾರೆ ಎಂದು ಹೇಳಲಾಗಿತ್ತು. ಇದೀಗ 12ನೇ ತರಗತಿ ಪರೀಕ್ಷೆ ಮಾತ್ರ ನಡೆಯಲಿದೆ ಎಂದು ತಿಳಿಸಿದ್ದಾರೆ.

See also  ಭದ್ರತಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ: ಮೂವರು ಉಗ್ರರ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು