News Kannada
Saturday, December 03 2022

ದೇಶ-ವಿದೇಶ

ಕೊರೋನಾ ಲಸಿಕೆ ತಯಾರಕರ ಜೊತೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಸಭೆ

Photo Credit :

ಕೊರೋನಾ ಲಸಿಕೆ ತಯಾರಕರ ಜೊತೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಸಭೆ

ನವದೆಹಲಿ, : ಒಂದು ಕಡೆ ದೇಶದಲ್ಲಿ ಕೊರೋನಾ ಲಸಿಕೆಗಳಿಗೆ ಕೊರತೆ ಉಂಟಾಗಿದೆ. ಇದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನಡುವಿನ‌ ಕಾದಾಟಕ್ಕೂ ಕಾರಣವಾಗಿದೆ. ಇನ್ನೊಂದೆಡೆ ಈಗ ಮೇ 1ರಿಂದ 18 ವರ್ಷ ದಾಟಿದ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ನಿರ್ಧಾರ ಮಾಡಲಾಗಿದೆ. ಈ‌ ಹಿನ್ನಲೆಯಲ್ಲಿ ಇಂದು ಕೊರೊನಾ ಲಸಿಕೆ ಉತ್ಪಾದನಾ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮಾಲೋಚನೆ ನಡೆಸಿದ್ದಾರೆ.
ಸಂಜೆ 6 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊರೊನಾ ಲಸಿಕೆ ಉತ್ಪಾದನಾ ಸಂಸ್ಥೆಗಳ ಮುಖ್ಯಸ್ಥರ ಜೊತೆಗಿನ ಸಭೆ ನಡೆಯಲಿದ್ದು, ದೇಶದಲ್ಲಿ ಕೊರೋನಾ ಲಸಿಕೆ ಉತ್ಪಾದನೆಯ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಲಾಗುವುದು.‌ ಲಸಿಕೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವ ರೀತಿ ನೆರವು ನೀಡಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಲಾಗುತ್ತಿದೆ.
ಇದಲ್ಲದೆ ರಾಜ್ಯ ಸರ್ಕಾರಗಳು ನೇರವಾಗಿ ಲಸಿಕೆ ಉತ್ಪಾದನಾ ಸಂಸ್ಥೆಗಳಿಂದ ಲಸಿಕೆಗಳನ್ನು ಖರೀದಿ ಮಾಡಬಹುದು ಎಂದು ನಿರ್ಧರಿಸುವುದರಿಂದ ಇಂದಿನ ಸಭೆಯಲ್ಲಿ ಲಸಿಕೆ ಉತ್ಪಾದನಾ ಸಂಸ್ಥೆಗಳು ರಾಜ್ಯ ಸರ್ಕಾರಗಳ ಜೊತೆ ಮಾಡಿಕೊಳ್ಳಬೇಕಾದ ಒಪ್ಪಂದದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕು ಪೀಡಿತರು ಪತ್ತೆ ಆಗುತ್ತಿದ್ದಾರೆ‌.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದರು. ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌ ಕೊರೋನಾ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದರು. ಈಗ ದಿನ‌ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಗೋಚರಿಸಲು ಆರಂಭಿಸಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ಲಸಿಕೆಯ ಕೊರತೆ ವ್ಯಾಪಕವಾಗಿ ಕಾಡುತ್ತಿದೆ.
ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು. ಆದರೆ ಈಗ ಎರಡನೇ ಅಲೆ ಶುರುವಾದ ಮೇಲೆ ಇದೇ ಮೊದಲ ಬಾರಿಗೆ ಏಪ್ರಿಲ್ 4ರಂದು 1,03,558 ಪ್ರಕರಣಗಳು ಪತ್ತೆಯಾಗಿದ್ದವು.

See also  ವೈಮಾನಿಕ ದಾಳಿ: ಸಂಜೆ ಸರ್ವ ಪಕ್ಷಗಳ ಸಭೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು