News Kannada
Thursday, September 29 2022

ದೇಶ-ವಿದೇಶ

ರಾಜ್ಯಕ್ಕೆ ದಿನಕ್ಕೆ 802 ಟನ್ ಆಮ್ಲಜನಕ ಪೂರೈಸಲು ಕೇಂದ್ರಕ್ಕೆ ಹೈಕೋರ್ಟ್ ನಿರ್ದೇಶನ - 1 min read

Photo Credit :

ರಾಜ್ಯಕ್ಕೆ  ದಿನಕ್ಕೆ 802 ಟನ್ ಆಮ್ಲಜನಕ ಪೂರೈಸಲು  ಕೇಂದ್ರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಜ್ಯಕ್ಕೆ ಹಂಚಿಕೆ ಮಾಡಲು ಕೊಟ್ಟಿರುವ ಒಪ್ಪಿಗೆಯಂತೆ ದಿನಕ್ಕೆ 802 ಟನ್ ಆಮ್ಲಜನಕ ಪೂರೈಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.
‘ಆಮ್ಲಜನಕ ಕೊರತೆ ಬಗ್ಗೆ ಇದೇ 24ರಂದು ಕೇಂದ್ರ ಸರ್ಕಾರದ ಜತೆ ಸಮಾಲೋಚನೆ ನಡೆಸಲಾಗಿದೆ’ ಎಂದು ರಾಜ್ಯ ಸರ್ಕಾರ ಸಲ್ಲಿಸಿದ ವಿವರಣೆ ಆಧರಿಸಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ವಿಶೇಷ ವಿಭಾಗೀಯ ಪೀಠ ಈ ಆದೇಶ ನೀಡಿತು. ‘ಆಮ್ಲಜನಕ ಮತ್ತು ರೆಮ್‌ಡಿಸಿವಿರ್ ಪೂರೈಕೆಯ ಕೊರತೆ ಆತಂಕಕಾರಿ ವಿಷಯ’ ಎಂದೂ ಪೀಠ ಹೇಳಿತು.
ಆಮ್ಲಜನಕ ಮತ್ತು ರೆಮ್‌ಡಿಸಿವಿರ್ ಕೊರತೆ ಇದೆ ಎಂದು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಂ ಅಸೋಸಿಯೇಷನ್‌ (ಫನಾ) ಅಧ್ಯಕ್ಷ ಡಾ. ಎಚ್‌.ಎಂ. ಪ್ರಸನ್ನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ‘ಅಗತ್ಯ ಇರುವ ಪ್ರಮಾಣಕ್ಕಿಂತ ಶೇ 50ರಷ್ಟು ಕಡಿಮೆ ಆಮ್ಲಜನಕ ಮತ್ತು ಶೇ 25ರಷ್ಟು ರೆಮ್‌ಡಿಸಿವಿರ್ ಚುಚ್ಚುಮದ್ದುಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಪೂರೈಸಲಾಗುತ್ತಿದೆ’ ಎಂದು ಹೇಳಿದರು.ಈ ನಡುವೆ ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿದ ರಾಜ್ಯ ಸರ್ಕಾರ, ‘ಏ.30ರ ವೇಳೆಗೆ 3,24,944 ಸೋಂಕಿತರಿಗೆ ಪೂರೈಸಲು ದಿನಕ್ಕೆ 1,471 ಟನ್ ಆಮ್ಲಜನಕ ಅಗತ್ಯವಿದೆ. ಆದರೆ, ಸ್ಥಳೀಯ ಉತ್ಪಾದನಾ ಸಾಮರ್ಥ 812 ಟನ್ ಇದೆ. ರಾಜ್ಯಕ್ಕೆ ದಿನಕ್ಕೆ 600 ಟನ್ ಆಮ್ಲಜನಕ ಕೊರತೆ ಇದೆ. 802 ಟನ್‌ ಆಮ್ಲಜನಕ ಪೂರೈಸಲು ಕೇಂದ್ರ ಸರ್ಕಾರ ಒಪ್ಪಿದೆ’ ಎಂದು ತಿಳಿಸಿತು.‘ರಾಜ್ಯಕ್ಕೆ ಹಂಚಿಕೆ ಮಾಡಿರುವ ಆಮ್ಲಜನಕವನ್ನು ಪೂರೈಸಬೇಕು’ ಕೇಂದ್ರ ಸರ್ಕಾರಕ್ಕೆ ‍ಪೀಠ ನಿರ್ದೇಶನ ನೀಡಿತು. ಬೆಂಗಳೂರಿನ ಕಮಾಂಡೋ ಆಸ್ಪತ್ರೆ ಮತ್ತು ಇತರ ಆಸ್ಪತ್ರೆಗಳಲ್ಲಿ ಕೆಲ ಹಾಸಿಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗೆ ಪಡೆದುಕೊಳ್ಳಲು ಸಂಬಂಧಪಟ್ಟವರೊಂದಿಗೆ ಮಾತುಕತೆ ನಡೆಸಿ’ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಪೀಠ ಸೂಚಿಸಿತು.
ಕೋವಿಡ್‌ ರೋಗಿಗಳಿಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಲಭ್ಯ ಇರುವ ಹಾಸಿಗೆ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡು ಬಂದಿಲ್ಲ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

 

See also  ಯುವಕನ ಸಜೀವ ದಹನ: ಅಕ್ರಮ ಸಂಬಂಧ ಶಂಕಿಸಿ ಮಹಿಳೆಯಿಂದ ದುಷ್ಕ್ಯೃತ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು