News Kannada
Friday, October 07 2022

ದೇಶ-ವಿದೇಶ

ಭಾರತಕ್ಕೆ ಎಲ್ಲಾ ರೀತಿಯ ನೆರವು ನೀಡಲು ಸಿದ್ಧ ಎಂದ ವಿಶ್ವಸಂಸ್ಥೆ - 1 min read

Photo Credit :

ಭಾರತಕ್ಕೆ ಎಲ್ಲಾ ರೀತಿಯ ನೆರವು ನೀಡಲು ಸಿದ್ಧ ಎಂದ ವಿಶ್ವಸಂಸ್ಥೆ

ವಾಷಿಂಗ್ಟನ್, : ಭಾರತಕ್ಕೆ ಎಲ್ಲಾ ರೀತಿಯ ನೆರವು ನೀಡಲು ಸಿದ್ಧ ಎಂದು ವಿಶ್ವಸಂಸ್ಥೆ ಹೇಳಿದೆ.ಈ ಕುರಿತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರ ಉಪವಕ್ತಾರ ಫರ್ಹಾನ್ ಹಕ್ ಹೇಳಿದ್ದಾರೆ.ನಿರ್ದಿವಾದ ನೆರವಿಗಾಗಿ ಈ ವರೆಗೆ ಬೇಡಿಕೆ ಬಂದಿಲ್ಲ, ಯಾವುದೇ ಪರಿಹಾರ, ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ನಾವು ಭಾರತಕ್ಕೆ ಕಳುಹಿಸಿಲ್ಲ, ಆದರೆ ಬೇಡಿಕೆ ಬಂದ ತಕ್ಷಣ ಸ್ಪಂದಿಸಲು ಸಿದ್ಧವಾಗಿದ್ದೇವೆ ಎಂದರು.
ಅಭಾರತದ ವಿವಿಧ ಹಂತ ಅಧಿಕಾರಿಗಳೊಂದಿಗೆ ನಾವು ಸತತ ಸಂಪರ್ಕದಲ್ಲಿದ್ದೇವೆ, ನ್ಯಾಉಯಾರ್ಕ್ ಹಾಗೂ ಭಾರತದಲ್ಲಿರುವ ಸಂಬಂಧಪಟ್ಟ ಪ್ರತಿನಿಧಿಗಳೊಂದಿಗೂ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದರು.
ಭಾರತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವ ಸಂಸ್ಥೆಯ ಸಿಬ್ಬಂದಿಯ ಆರೋಗ್ಯ ಕಾಪಾಡುವ ಜವಾಬ್ದಾರಿಯನ್ನು ನಾವೇ ತೆಗೆದುಕೊಂಡಿದ್ದೇವೆ. ಈಗಾಗಲೇ ಕೋವಿಡ್ ಪಿಡುಗಿನಿಂದ ತತ್ತರಿಸಿರುವ ಭಾರತದ ಆರೋಗ್ಯ ಕ್ಷೇತ್ರದ ಮೇಲೆ ಮತ್ತಷ್ಟು ಒತ್ತಡ ಹೇರಬಾರದು ಎಂಬ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಭಾರತದ ರೂಪಾಂತರಿ ಕೊರೊನಾ ಸೋಂಕು ವಿಶ್ವದ 17ಕ್ಕೂ ಅಧಿಕ ದೇಶಗಳಲ್ಲಿ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ. ಈಗಾಗಲೇ ಕೆನಡಾ, ಆಸ್ಟ್ರೇಲಿಯಾ ಸೇರಿ ಹಲವು ರಾಷ್ಟ್ರಗಳು ಭಾರತದಿಂದ ಬರುವ ಪ್ರಯಾಣಿಕ ವಿಮಾನಗಳಿಗೆ ನಿರ್ಬಂಧ ಹೇರಿವೆ.ಈಗಾಗಲೇ ಅನೇಕ ದೇಶಗಳಲ್ಲಿ ರೂಪಾಂತರಿ ಕೊರೊನಾ ಸೋಂಕು ಹರಡುತ್ತಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೋವಿಡ್-19 ನ ಬಿ.1.617 ಕೊರೊನಾ ರೂಪಾಂತರಿ ಮೊದಲಿಗೆ ಭಾರತದಲ್ಲಿ ಪತ್ತೆಯಾದ ನಂತರ ನಿನ್ನೆಯ ಹೊತ್ತಿಗೆ ಕನಿಷ್ಠ 17 ದೇಶಗಳಲ್ಲಿ 1,200 ಕ್ಕೂ ಹೆಚ್ಚು ಅನುಕ್ರಮಗಳಲ್ಲಿ ಪತ್ತೆಯಾಗಿದೆ. ಇದು ಬೇರೆ ರೂಪಾಂತರಿ ಕೊರೊನಾಕ್ಕಿಂತ ಹೆಚ್ಚು ಅಪಾಯಕಾರಿ ಮತ್ತು ವೇಗವಾಗಿ ಹರಡುತ್ತಿದೆ. ಅವುಗಳಲ್ಲಿ ಅತಿ ಹೆಚ್ಚು ಭಾರತ, ಇಂಗ್ಲೆಂಡ್, ಅಮೆರಿಕ ಮತ್ತು ಸಿಂಗಾಪುರಗಳಲ್ಲಿ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ಕುರಿತ ವರದಿಯಲ್ಲಿ ತಿಳಿಸಿದೆ.

 

See also  ಆಂಧ್ರಪ್ರದೇಶದಲ್ಲಿ ಜೂನ್ 20 ರವರೆಗೆ ಲಾಕ್ ಡೌನ್ ವಿಸ್ತರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು