News Kannada
Friday, September 30 2022

ದೇಶ-ವಿದೇಶ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮುನ್ನಡೆ – ನಂದಿ ಗ್ರಾಮದಲ್ಲಿ ಮಮತಾಗೆ ಹಿನ್ನಡೆ - 1 min read

Photo Credit :

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮುನ್ನಡೆ – ನಂದಿ ಗ್ರಾಮದಲ್ಲಿ ಮಮತಾಗೆ ಹಿನ್ನಡೆ

ಕೋಲ್ಕತ್ತಾ: ಇಡೀ ದೇಶವೇ ಕುತೂಹಲದಿಂದ ಗಮನಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಭಾರೀ ಸ್ಪರ್ಧೆ ನಡೆಯುತ್ತಿದೆ.ಎರಡು ಪಕ್ಷಗಳ ನಡುವೆ ಹಾವು ಏಣಿ ಆಟ ನಡೆಯುತ್ತಿದೆ. ಒಂದು ಚುನಾವಣಾ ಸುತ್ತು ಮುಗಿದಾಗ ಟಿಎಂಸಿ ಮುನ್ನಡೆ ಸಾಧಿಸಿದರೆ ಮತ್ತೊಂದು ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಾರೆ.
ವಿಶೇಷವಾಗಿ ನಂದಿ ಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಆರಂಭದ ಸುತ್ತಿನಲ್ಲಿ ಹಿನ್ನಡೆಯಾಗಿದ್ದು, ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದಾರೆ. ಒಟ್ಟು 292 ಕ್ಷೇತ್ರಗಳ ಪೈಕಿ ಬಿಜೆಪಿ 66, ಟಿಎಂಸಿ 64 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಎಡ ಪಕ್ಷಗಳು 2 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. 2016ರ ಚುನಾವಣೆಯಲ್ಲಿ ಟಿಎಂಸಿ 211 ಕ್ಷೇತ್ರಗಳಲ್ಲಿ ಜಯಗಳಿಸಿದರೆ ಕಾಂಗ್ರೆಸ್ 44 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು.

See also  ಬರ ಪರಿಹಾರವಾಗಿ ರಾಜ್ಯಕ್ಕೆ 1,782.44 ಕೋಟಿ.ರೂ ಬಿಡುಗಡೆಗೆ ಒಪ್ಪಿಗೆ ಸೂಚಿಸಿದ ಕೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು