News Kannada
Wednesday, October 05 2022

ದೇಶ-ವಿದೇಶ

ಜಿಂದಾಲ್​ಗೆ 3667 ಎಕರೆ ಭೂಮಿ ; ಸರ್ಕಾರದ ನಿರ್ಧಾರ ವಿರೋಧಿಸಿದ ಬಿಜೆಪಿ ಶಾಸಕರು! - 1 min read

Photo Credit :

ಜಿಂದಾಲ್​ಗೆ 3667 ಎಕರೆ ಭೂಮಿ  ; ಸರ್ಕಾರದ ನಿರ್ಧಾರ ವಿರೋಧಿಸಿದ ಬಿಜೆಪಿ ಶಾಸಕರು!

ಬೆಂಗಳೂರು: ಜಿಂದಾಲ್‌ ಕಂಪನಿಗೆ ಭೂಮಿ ನೀಡುವ ವಿಚಾರ ಪುನರ್ ಪರಿಶೀಲಿಸಲು ಸಿಎಂಗೆ ಕೆಲ ಬಿಜೆಪಿ ಶಾಸಕರೇ ಪತ್ರ ಬರೆದಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ಜಿಂದಾಲ್ ಸಂಸ್ಥೆಗೆ ಜಮೀನು ನೀಡಿರುವುದಕ್ಕೆ ಆಡಳಿತ ಪಕ್ಷದಿಂದಲೇ ವಿರೋಧ ವ್ಯಕ್ತವಾಗಿದೆ.ಈ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಬಿಜೆಪಿಯ ಶಾಸಕರು ಮುಖ್ಯಮಂತ್ರಿಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಜಿಂದಾಲ್‌ಗೆ ಜಮೀನು ನೀಡುವ ತೀರ್ಮಾನವನ್ನು ಸರ್ಕಾರ ಮರು ಪರಿಶೀಲನೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಶಾಸಕರಾದ ಬಸನಗೌಡ ಯತ್ನಾಾಳ, ಅರವಿಂದ ಬೆಲ್ಲದ, ಆರ್. ಪೂರ್ಣಿಮಾ ಸತೀಶ್ ರೆಡ್ಡಿ, ಉದಯ ಗರುಡಾಚಾರ್ಯ, ಅಭಯ್ ಪಾಟೀಲ್, ಸುನೀಲ್ ಕುಮಾರ್ ಸೇರಿದಂತೆ 45 ಕ್ಕೂ ಹೆಚ್ಚು ಶಾಸಕರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿದೆ.ರಾಜ್ಯ ಸರ್ಕಾರ ಏಪ್ರಿಲ್ 24 ರಂದುನಡೆದ ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿರುವ ಜಿಂದಾಲ್ ಉಕ್ಕು ಕಂಪನಿಗೆ 3667 ಎಕರೆ ಸರ್ಕಾರಿ ಭೂಮಿಯನ್ನು ಅತಿ ಕಡಿಮೆ ದರಕ್ಕೆ ಶುದ್ಧ ಕ್ರಯ ಪತ್ರ ಮಾಡಿಕೊಡಲು ಒಪ್ಪಿಗೆ ನೀಡಿತ್ತು.ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇಡೀ ರಾಜ್ಯ ಕೋವಿಡ್ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಮರು ಪರಿಶೀಲನೆ ನಡೆಸುವುದು ಸೂಕ್ತ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಹಿಂದಿನ ಮೈತ್ರಿ ಸರ್ಕಾರ ಜಿಂದಾಲ್‌ಗೆ ಜಮೀನು ನೀಡುವ ತೀರ್ಮಾನ ತೆಗೆದುಕೊಂಡಾದ ಅದರ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಾಗಿತ್ತು. ಈ ವಿಚಾರವನ್ನು ಪಕ್ಷದ ಶಾಸಕಾಂಗ ಸಭೆಯಲ್ಲಿ ಚರ್ಚಿಸದೇ ತೀರ್ಮಾನ ತೆಗೆದುಕೊಳ್ಳಬೇಕಾಗಿತ್ತು ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಈಗ ರಾಜ್ಯ ಸರ್ಕಾರ ಕಡಿಮೆ ದರಕ್ಕೆ ಜಿಂದಾಲ್‌ಗೆ ಜಮೀನು ನೀಡಲು ತೀರ್ಮಾನಿಸಿರುವುದರಿಂದ ಬಿಜೆಪಿ ಸರ್ಕಾರ ಎಷ್ಟು ಕಿಕ್ ಬ್ಯಾಕ್ ಪಡೆದಿದೆ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿವೆ. ಅಷ್ಟೊಂದು ಬೆಲೆ ಬಾಳುವ ಭೂಮಿಯನ್ನು ಕೇವಲ ಎಕರೆಗೆ 1.28 ಲಕ್ಷ ರೂ.ಗೆ ಕ್ರಯ ಪತ್ರ ಮಾಡಲು ಮುಂದಾಗಿರುವುದು ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟ ಮಾಡಿದಂತಾಗುತ್ತದೆ ಎಂದಿದ್ದಾರೆ.ಹೀಗಾಗಿ ರಾಜ್ಯ ಸರ್ಕಾರ ಈಗ ತೆಗೆದುಕೊಂಡಿರುವ ತೀರ್ಮಾನವನ್ನು ಮರು ಪರಿಶೀಲನೆ ನಡೆಸಬೇಕು ಮತ್ತು ಈ ವಿಚಾರದ ಬಗ್ಗೆ ಪಕ್ಷದ ಶಾಸಕಾಂಗ ಸಭೆಯಲ್ಲಿ ಮತ್ತೊಮ್ಮೆ ಚರ್ಚೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

See also  ದಕ್ಷಿಣ ಆಫ್ರಿಕಾದಿಂದ ಸಿಂಗಾಪುರಕ್ಕೆ ಬಂದ ಇಬ್ಬರಲ್ಲಿ ಓಮೈಕ್ರಾನ್ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು