News Kannada
Sunday, October 02 2022

ದೇಶ-ವಿದೇಶ

ಮುಂಬೈ, ಪುಣೆ ಕಂಟೈನ್ಮೆಂಟ್ ಮಾದರಿ ಎಂದ ಆರೋಗ್ಯ ಸಚಿವಾಲಯ - 1 min read

Photo Credit :

ಮುಂಬೈ, ಪುಣೆ ಕಂಟೈನ್ಮೆಂಟ್ ಮಾದರಿ ಎಂದ ಆರೋಗ್ಯ ಸಚಿವಾಲಯ

ಮುಂಬೈ, ; ದೇಶವ ವಿವಿಧ ರಾಜ್ಯಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಕೋವಿಡ್ 2ನೇ ಅಲೆಯಲ್ಲಿ ಈಗ ಮೈಕ್ರೋ ಕಂಟೈನ್ಮೆಂಟ್ ಝೋನ್‌ಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಂಬೈ ಮತ್ತು ಪುಣೆ ಮಾದರಿ ಬಗ್ಗೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಕಳೆದ ತಿಂಗಳು ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್‌ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಸಭೆಯಲ್ಲಿ ಮಾತನಾಡಿದ್ದರು. ಮಂಗಳವಾರ ರಾಜ್ಯಗಳ ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚಿಸಲು ನಡೆದ ಉನ್ನತ ಮಟ್ಟದ ಸಭೆಯಲ್ಲಿಯೂ ಇದೇ ವಿಚಾರ ಪ್ರಸ್ತಾಪವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಿ ಸೋಂಕು ತಡೆಯುವ ಬಗ್ಗೆ ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡಿದೆ.ಮಹಾರಾಷ್ಟ್ರದ ಪುಣೆ, ಮುಂಬೈ ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿತ್ತು. ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡುವ ಮೂಲಕ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ತರಲಾಗಿದೆ.
ದೇಶದಲ್ಲಿ ಕೋವಿಡ್ ಹರಡುವಿಕೆ ತಡೆಯಲು ಪುಣೆ, ಮುಂಬೈ ರೀತಿಯ ಕಂಟೈನ್ಮೆಂಟ್ ಮಾದರಿ ದೇಶದ್ಯಾಂತ ಜಾರಿಗೆ ಬರಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.ಮಂಗಳವಾರ ಪುಣೆಯಲ್ಲಿ 7,665 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 9,38,474ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ 1,717 ಹೊಸ ಪ್ರಕರಣ ದಾಖಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಕೋವಿಡ್ ಸೋಂಕು ಹರಡುವಿಕೆ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಸೋಂಕು ನಿಯಂತ್ರಣಕ್ಕೆ ತರಲು ರಾಜ್ಯಗಳು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸೂಚನೆ ನೀಡಿದೆ.

See also  ಮಹಿಳೆ ಮೋಹಕ್ಕೆ ಬಿದ್ದು ದೇಶ ಮಾರಲು ಹೋಗಿದ್ದ ವಾಯುಸೇನೆ ಅಧಿಕಾರಿ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು