News Kannada
Sunday, September 25 2022

ದೇಶ-ವಿದೇಶ

24 ಸಾವುಗಳಿಗೆ ಆಕ್ಸಿಜನ್‌ ಕೊರತೆಯೇ ಕಾರಣ ಎಂದ ಹೈ ಕೋರ್ಟ್‌ ತಜ್ಞರ ಸಮಿತಿ ವರದಿ ; ಮೈಸೂರು ಡಿಸಿ ಗೆ ಕ್ಲೀನ್‌ ಚಿಟ್‌ - 1 min read

Photo Credit :

24 ಸಾವುಗಳಿಗೆ ಆಕ್ಸಿಜನ್‌ ಕೊರತೆಯೇ ಕಾರಣ ಎಂದ ಹೈ ಕೋರ್ಟ್‌ ತಜ್ಞರ ಸಮಿತಿ ವರದಿ ; ಮೈಸೂರು ಡಿಸಿ ಗೆ ಕ್ಲೀನ್‌ ಚಿಟ್‌

ಚಾಮರಾಜನಗರ ಮೇ 13; ಇಲ್ಲಿನ ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಸಿಐಎಂಎಸ್‌) ಕಳೆದ ಮೇ 2 ರ ಮಧ್ಯರಾತ್ರಿ ಆಕ್ಸಿಜನ್‌ ಕೊರತೆಯಿಂದ ಸಂಭವಿಸಿದೆ ಎಂದು ಹೇಳಲಾದ 24 ಜನರ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್‌ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ಧೃಢಪಡಿಸಿದೆ ಎಂದು ತಿಳಿದು ಬಂದಿದೆ. ಈ ಸಮಿತಿಯು ಹೈ ಕೋರ್ಟಿಗೆ ತನ್ನ ವರದಿಯನ್ನೂ ಸಲ್ಲಿಸಿದೆ.

‘ಮೇ 2ರಂದು ರಾತ್ರಿ 11 ರಿಂದ ಮೇ 3ರ ಸಂಜೆ ತನಕ ‌ಆಸ್ಪತ್ರೆಯಲ್ಲಿ ಆಮ್ಲಜನಕವೇ ಲಭ್ಯವಿರಲಿಲ್ಲ’ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರದ ಸಮಿತಿಯು ಪತ್ತೆ ಹಚ್ಚಿದೆ. ಅಲ್ಲದೆ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. 24 ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಮತ್ತು ಇತರ ನಾಲ್ವರನ್ನು ಒಳಗೊಂಡ ಸಮಿತಿ ನಡೆಸಿದ ವರದಿಯನ್ನೂ ಸಮಿತಿ ವಿಶ್ಲೇಷಿಸಿದೆ. ಆಮ್ಲಜನಕದ ಕೊರತೆಯಿಂದ ಮೂವರು, ಮೆದುಳಿಗೆ ಆದ ಗಾಯದಿಂದ 7 ಮಂದಿ ಮತ್ತು ಕೋವಿಡ್ ಕಾರಣದಿಂದ 14 ಮಂದಿ ಮೃತಪಟ್ಟಿದ್ದಾರೆ ಎಂದು ಆ ಸಮಿತಿಯ ವರದಿ ಹೇಳಿತ್ತು. ಗಂಭೀರ ಸಮಯದಲ್ಲಿ ಅವರಿಗೆ ಆಮ್ಲಜನಕದ ಅಗತ್ಯವಿತ್ತು. ಆದರೆ, ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯೇ ಇರಲಿಲ್ಲ. ಮೃತಪಟ್ಟವರ ಕೇಸ್ ಶೀಟ್‌ಗಳನ್ನು ಗಮನಿಸಿದರೆ ಅವರಿಗೆ ಆಮ್ಲಜನಕದ ಅಭಾವ ಇತ್ತು ಎಂಬುದನ್ನು ಸೂಚಿಸುತ್ತದೆ. ಆಮ್ಲಜನಕ ಕೊರತೆ ಕಾರಣಕ್ಕೆ ಮೆದುಳಿನ ಕೋಶಗಳಿಗೆ ಹಾನಿಯಾಗಿದೆ’ ಎಂದು ಹೈಕೋರ್ಟ್‌ ನೇಮಿಸಿದ್ದ ಸಮಿತಿ ಅಭಿಪ್ರಾಯಪಟ್ಟಿದೆ.
‘ಮೈಸೂರಿನಲ್ಲಿನ ಆಮ್ಲಜನಕ ಸಿಲಿಂಡರ್ ಮರುಪೂರಣ ಘಟಕದಿಂದ ಆಸ್ಪತ್ರೆಗೆ ಆಮ್ಲಜನಕ ಸರಬರಾಜು ಮಾಡಿಕೊಳ್ಳುವುದು ಜಿಲ್ಲಾಡಳಿತ ಮತ್ತು ಆಸ್ಪತ್ರೆ ಅಧಿಕಾರಿಗಳ ಜವಾಬ್ದಾರಿ. ಆಸ್ಪತ್ರೆಯ ಆಡಳಿತ ಜಾಗರೂಕರಾಗಿದ್ದರೆ, ಪೂರೈಕೆದಾರರು ಸಮಯೋಚಿತವಾಗಿ ಮರುಪೂರಣಗೊಳಿಸಿದ್ದರೆ ಸಾಕಷ್ಟು ಆಮ್ಲಜನಕ ಸಂಗ್ರಹಿಸಬಹುದಿತ್ತು. ಅದನ್ನು ಮಾಡದೆ ಇರುವುದು ಅಮೂಲ್ಯ ಜೀವಗಳ ಹಾನಿಗೆ ಕಾರಣವಾಗಿದೆ’ ಎಂದು ವರದಿ ಹೇಳಿದೆ. ‘ಸಂದರ್ಭಕ್ಕೆ ತಕ್ಕಂತೆ ನಾಯಕತ್ವ ಮತ್ತು ಕ್ರಿಯಾಶೀಲತೆ ತೋರಿಸುವಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ವಿಫಲವಾಗಿದ್ದಾರೆ. ಚಾಮರಾಜನಗರಕ್ಕೆ ಆಮ್ಲಜನಕ ಸಾಗಿಸಲು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಡೆ ಒಡ್ಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ’ ಎಂದು ವರದಿ ಹೇಳಿದೆ. ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಆರೋಪ ಸಾಬೀತುಪಡಿಸುವ ಯಾವುದೇ ದಾಖಲೆಗಳಿಲ್ಲ. ಚಾಮರಾಜನಗರ ಜಿಲ್ಲೆ ಸೇರಿ ಯಾವುದೇ ಜಿಲ್ಲೆಗೆ ಆಮ್ಲಜನಕ ಪೂರೈಸಲು ರೋಹಿಣಿ ಸಿಂಧೂರಿ ತಡೆದಿದ್ದಾರೆ ಎಂದು ಹೇಳಲು ಯಾವುದೇ ಸಾಕ್ಷ್ಯ ಇಲ್ಲ ಎಂದೂ ಸಮಿತಿ ತಿಳಿಸಿದೆ.

See also  ಬಾಬಾ ರಹೀಂ, ರಾಧೆ ಮಾ, ಅಸರಾಂ ಬಾಪು ರನ್ನು ನಕಲಿ ಬಾಬಾಗಳ ಪಟ್ಟಿಗೆ ಸೇರಿಸಿ: ಅಖಿಲ ಭಾರತೀಯ ಅಖರ ಪರಿಷತ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು