News Kannada
Tuesday, February 07 2023

ದೇಶ-ವಿದೇಶ

ಕೋವಿಡ್ ಕೈಮೀರಲು ಕಾಂಗ್ರೆಸ್ಸಿಗರೇ ಕಾರಣ: ನಳಿನ್ ಕುಮಾರ್ ಕಟೀಲ್

Photo Credit :

ಕೋವಿಡ್ ಕೈಮೀರಲು ಕಾಂಗ್ರೆಸ್ಸಿಗರೇ ಕಾರಣ: ನಳಿನ್ ಕುಮಾರ್ ಕಟೀಲ್

ಕಲಬುರ್ಗಿ: ‘ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗಲು ಕಾಂಗ್ರೆಸ್ಸಿಗರ ನೀಚ ರಾಜಕಾರಣವೇ ಕಾರಣ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪುನರುಚ್ಚರಿಸಿದರು.ಈಚೆಗೆ ಮೃತಪಟ್ಟ ಬಿಜೆಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ದತ್ತು ತೂಗಾಂವಕರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟ ಸಂದರ್ಭ, ನಗರದ ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
‘ದೇಶದ ಲಸಿಕೆ ಬಗ್ಗೆ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡಿದರು. ಈ ಲಸಿಕೆ ಪರಿಣಾಮಕಾರಿ ಇಲ್ಲ, ಇದರಿಂದ ಪುರುಷತ್ವ ಕಡಿಮೆ ಆಗುತ್ತದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದರು. ಇದರಿಂದ ಲಸಿಕೆ ಪಡೆಯಲು ಹಲವರು ಹಿಂಜರಿದರು. ಅದರ ಪರಿಣಾಮವೇ ಈಗ ಸೋಂಕು ಹಾಗೂ ಸಾವಿನ ಪ್ರಮಾಣ ಹೆಚ್ಚಾಗಿದೆ’ ಎಂದೂ ದೂರಿದರು.’ಲಸಿಕೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡಿದೆ ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಸತ್ಯದಿಂದ ಕೂಡಿದೆ. ವ್ಯಾಕ್ಸಿನ್ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ವ್ಯವಸ್ಥಿತವಾಗಿ ಮಾಡಿದೆ’ ಎಂದೂ ಕಟೀಲ್ ಆರೋಪಿಸಿದರು.’ಫೆಬ್ರುವರಿಯಲ್ಲಿ ಸ್ವತಃ ಪ್ರಧಾನಿ ಮೋದಿ ಅವರೇ ಲಸಿಕೆ ತಗೊಂಡು ಜನರಿಗೆ ಪ್ರೇರಣೆ ನೀಡಿದರು. ಆದರೂ ಜನ ಮೇ ವರೆಗೂ ಲಸಿಕೆಗಾಗಿ ಮುಂದೆ ಬರಲಿಲ್ಲ. ಈಗ ಅದೇ ಕಾಂಗ್ರೆಸ್ಸಿಗರು ಲಸಿಕೆ ಇಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ’ ಎಂದರು.
‘ಸಿದ್ದರಾಮಯ್ಯ ಕೂಡ ಇದಕ್ಕೆ ಹೊರತಿಲ್ಲ. ಕಾಂಗ್ರೆಸ್ ಹೈಕಮಾಂಡ್ ಏನು ಮಾಡುತ್ತದೋ ಸಿದ್ದರಾಮಯ್ಯ ಸಹ ಅದನ್ನೇ ಮಾಡುತ್ತಾರೆ. ಅಧಿಕಾರಕ್ಕೆ ಈ ರೀತಿಯ ವರ್ತನೆಯನ್ನು ಜನ ಸಹಿಸುವುದಿಲ್ಲ. ಅದಕ್ಕಾಗಿಯೇ ಜನ ಅವರನ್ನು ವರುಣಾ ಕ್ಷೇತ್ರದಿಂದ ಓಡಿಸಿದ್ದಾರೆ. ಇದೇ ರೀತಿ ಮಾಡಿದರೆ ಬಾದಾಮಿಯಿಂದಲೂ ಓಡಿಸುತ್ತಾರೆ’ ಎಂದೂ ಕಟೀಲ್ ಹೇಳಿದರು.

See also  ಭಾರತದಲ್ಲಿ ಅಮೆರಿಕದ ಆರು ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಸಮ್ಮತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು