News Kannada
Friday, December 09 2022

ದೇಶ-ವಿದೇಶ

ಕಾಳ ಸಂತೆಯಲ್ಲಿ ರೆಮಿಡಿಸಿವಿರ್‌ ಮಾರಾಟ ; ನಾಲ್ವರ ಬಂಧನ

Photo Credit :

ಕಾಳ ಸಂತೆಯಲ್ಲಿ ರೆಮಿಡಿಸಿವಿರ್‌ ಮಾರಾಟ ; ನಾಲ್ವರ ಬಂಧನ

ಗದಗ: ಜಿಲ್ಲೆಯಲ್ಲೂ ರೆಮ್ಡಿಸಿವಿರ್​ಅನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಜಿಲ್ಲಾ ಸೈಬರ್ ವಿಭಾಗದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್​​ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.
ಸದ್ಯ ನಾಲ್ವರ ಬಂಧನವಾಗಿದ್ದು, ಇನ್ನೋರ್ವ ಮಹಿಳಾ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಆಸ್ಪತ್ರೆಯ ನರ್ಸ್, ಜಿಮ್ಸ್​ನ ಲ್ಯಾಬ್ ಟೆಕ್ನಿಷಿಯನ್, ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಈ ಆರೋಪಿಗಳು ರೂ. 3 ಸಾವಿರದ ಔಷಧವನ್ನು ರೂ. 30 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು ಎಂದು ಎಸ್​ಪಿ ತಿಳಿಸಿದ್ದಾರೆ.
ಮಹಮದ್ ಇಸ್ಮಾಯಿಲ್ ಓದೇಕಾರ, ಪಿರೋಜ್ ಖಾನ್ ಪಠಾಣ, ಜಿಮ್ಸ್​​ನ ಲ್ಯಾಬ್ ಟೆಕ್ನಿಷಿಯನ್ ಗವಿಸಿದ್ದಯ್ಯ ಹಿರೇಮಠ, ರಮೇಶ ಚವಟಗಿ, ನರ್ಸ್ ಜ್ಯೋತಿ ಲಮಾಣಿ ಆರೋಪಿತರು. ಸದ್ಯ ನಾಲ್ವರ ಬಂಧನವಾಗಿದ್ದು, ಜ್ಯೋತಿ ಲಮಾಣಿ ಅವರ ಬಂಧನವಾಗಬೇಕಿದೆ.ಜೀವ ರಕ್ಷಕ ಇಂಜೆಕ್ಷನ್ ಔಷಧಿಯನ್ನು ಇವರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಕುರಿತು ಗುಪ್ತ ಮಾಹಿತಿ ಸಂಗ್ರಹಿಸಲಾಗಿತ್ತು. ಸೈಬರ್ ಪೊಲೀಸ್ ಇನ್ಸ್​​​ಪೆಕ್ಟರ್ ಮಹಾಂತೇಶ ಟಿ. ಅವರ ನೇತೃತ್ವದ ತಂಡ, ಗದಗ – ಮುಳಗುಂದ ರಸ್ತೆಯ ರಾಧಾಕೃಷ್ಣ ನಗರದ ಹತ್ತಿರ, 30 ಸಾವಿರಕ್ಕೆ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ.ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಇನ್ನೂ ಮೂವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಸದ್ಯ ಅವರಿಗಾಗಿ ಹುಡುಕಾಟ ನಡೆದಿದೆ. ಬಂಧಿತ ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 409, 420 ಸಹ ಕಲಂ- 34, ಐಪಿಸಿ ಮತ್ತು ಕಲಂ 4, 5, 6 ಮತ್ತು 13, ಡ್ರಗ್ಸ್ ಕಂಟ್ರೋಲ್ ಕಾಯ್ದೆ-1950ರ ಅಡಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೋವಿಡ್ಬಂಧಿತರಿಂದ ವಶಪಡಿಸಿಕೊಂಡಿರುವ 14 ರೆಮ್ಡಿಸಿವಿರ್​​ನ ಮೌಲ್ಯ ರೂ. 48,860 ಇದೆ. ಆದರೆ, ಆರೋಪಿತರು ರೂ. 30 ಸಾವಿರದಂತೆ ರೂ. 4,20,000 ಲೆಕ್ಕಾಚಾರದಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದರು. ಸದ್ಯ ಬಂಧಿತರಿಂದ ರೂ. 2,500 ನಗದು ಹಾಗೂ 4 ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಈ ಪ್ರಕರಣದ ತನಿಖೆಯನ್ನು ಗದಗ ಗ್ರಾಮೀಣ ಸಿಪಿಐ ರವಿ ಕಪ್ಪತ್ತನವರ ಮುಂದುವರೆಸಲಿದ್ದಾರೆ ಎಂದು ಎಸ್ಪಿ ಯತೀಶ್ ಎನ್. ಮಾಹಿತಿ ನೀಡಿದರು.

See also  ಕೋರ್ಟ್ ಕಲಾಪಗಳ ನೇರಪ್ರಸಾರಕ್ಕೆ ಸುಪ್ರೀಂಕೋರ್ಟ್ ಅನುಮತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು