ಬೆಂಗಳೂರು: ಖಾಸಗೀ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದ ನಂತರ ಮೃತರಾಗುವ ರೋಗಿಗಳ ಶವ ಗಳನ್ನು ಹಸ್ತಾಂತರಿಸದೆ ಚಿಕಿತ್ಸೆಯ ಬಾಕಿ ವೆಚ್ಚವನ್ನು ಭರಿಸುವಂತೆ ಒತ್ತಾಯಿಸುವ ಆಸ್ಪತ್ರೆಗಳ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆಸ್ಪತ್ರೆಯ ನೋಂದಣಿ ರದ್ದುಗೊಳಿಸುವಂತೆ ಸರ್ಕಾರ ಆದೇಶಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ‘ಕೆಲವು ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಮೃತದೇಹ ನೀಡಲು ಬಾಕಿ ಬಿಲ್ ಮೊತ್ತ ಪಾವತಿಸುವಂತೆ ಷರತ್ತು ವಿಧಿಸುತ್ತಿರುವ ದೂರುಗಳು ಬಂದಿವೆ. ಕೆಪಿಎಂಇ ಕಾಯ್ದೆಯ ಪ್ರಕಾರ ಈ ರೀತಿ ಮಾಡುವವರ ವಿರುದ್ಧ ಕ್ರಮ ಜರುಗಿಸಲು ಅವಕಾಶವಿದೆ. ಕೆಪಿಎಂಇ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಇಂತಹ ದೂರುಗಳನ್ನು ಆಧರಿಸಿ ಪ್ರಕರಣ ದಾಖಲಿಸಬೇಕು. ಶವ ನೀಡಲು ಬಿಲ್ ಪಾವತಿಗೆ ಒತ್ತಾಯಿಸುವ ಆಸ್ಪತ್ರೆಗಳ ನೋಂದಣಿ ರದ್ದುಗೊಳಿಸಬೇಕು’ ಎಂದು ತಿಳಿಸಿದ್ದಾರೆ.
ಅನೇಕ ಸಂದರ್ಭಗಳಲ್ಲಿ ಬಿಲ್ ಪಾವತಿಸದಿರುವುದಕ್ಕೆ ಶವವನ್ನು ದಿನಗಟ್ಟಲೆ ಇಟ್ಟುಕೊಂಡಿದ್ದ , ಅಲ್ಲದೆ ಬಿಲ್ ಪಾವತಿಸಲಾಗದೆ ಶವವನ್ನೇ ಆಸ್ಪತ್ರೆಗಳಲ್ಲಿ ಬಿಟ್ಟು ಹೋಗಿರುವ ಪ್ರಕರಣಗಳು ವರದಿ ಆದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಕಠಿಣ ಕ್ರಮಕ್ಕೆ ಮುಂದಾಗಿದೆ.
ಬಿಲ್ ಪಾವತಿಸದೆ ಮೃತದೇಹ ಕೊಡದಿದ್ದರೆ ಆಸ್ಪತ್ರೆ ನೋಂದಣಿ ರದ್ದು; ರಾಜ್ಯ ಸರ್ಕಾರ ಆದೇಶ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.