ಬೆಂಗಳೂರು : ಕೊರೋನಾ ಸೋಂಕಿನ ಕಾರಣದಿಂದಾಗಿ ಅನೇಕರು ಆಮ್ಲಜನಕ ಕೊರತೆಯಿಂದ ಸಾವನಪ್ಪುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹೈಕೋರ್ಟ್ ಹೊಸ ಸೂಚನೆಯನ್ನು ಬಿಡುಗಡೆ ಮಾಡಿದೆ.
ಪ್ರತಿ ಜಿಲ್ಲೆಯಲ್ಲೂ ಹೆಚ್ಚುವರಿ ಆಕ್ಸಿಜನ್ ಸಂಗ್ರಹ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ . ಕರ್ನಾಟಕಕ್ಕೆ ಹೊರ ರಾಜ್ಯಗಳಿಂದ 370 ಟನ್ ಮೆಟ್ರಿಕ್ ಟನ್ ಆಕ್ಸಿಜನ್ ತರಬೇಕು , ಹೊರ ರಾಜ್ಯಗಳಿಂದ ಆಕ್ಸಿಜನ್ ತರುವುದರಲ್ಲಿ ಕೆಲವು ಸಮಸ್ಯೆಗಳಿವೆ . ಆದ್ದರಿಂದ ಬಹುತೇಕ ದಿನಗಳಂದು ನಿಗದಿಯಷ್ಟು ಆಕ್ಸಿಜನ್ ಕರ್ನಾಟಕಕ್ಕೆ ತರಲು ಸಾಧ್ಯವಾಗಿಲ್ಲ ಎಂದು ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಹೈಕೋರ್ಟ್ ಗೆ ಮಾಹಿತಿ ನೀಡಿದರು.
ಈ ಮಾಹಿತಿಯ ಆಧಾರದ ಮೇಲೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ ಹೈಕೋರ್ಟ್ ಪೀಠ , ಕೇಂದ್ರ ಸರ್ಕಾರ ರಾಜ್ಯದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಬೇಕು , ಪ್ರತಿ ಜಿಲ್ಲೆಯಎಲ್ಲಿಯೂ ಹೆಚ್ಚುವರಿ ಆಕ್ಸಿಜನ್ ಸಂಗ್ರಹವಿರಬೇಕು , ಈ ಗುರಿ ಸಾಧಿಸಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಕೋರ್ಟ್ ಗೆ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶವನ್ನು ಹೊರಡಿಸಿದೆ.