ನವದೆಹಲಿ -ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ ಎಚ್ ಆರ್ ಸಿ) ನೂತನ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಒಂದು ದಿನ ಮುಂಚಿತವಾಗಿ ಅವರನ್ನು ಈ ಹುದ್ದೆಗೆ ನೇಮಿಸಲಾಗಿತ್ತು. ಅವರ ನೇಮಕಾತಿಯನ್ನು ಪ್ರಧಾನ ಮಂತ್ರಿ ಅಧ್ಯಕ್ಷತೆಯ ನೇತೃತ್ವದ ಉನ್ನತ ಮಟ್ಟದ ನೇಮಕಾತಿ ಸಮಿತಿ ಅನುಮೋದಿಸಿತ್ತು.
ಇದಕ್ಕೂ ಮೊದಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾಯಮೂರ್ತಿ ಎಚ್.ಎಲ್. ದತ್ತೂ ಇದ್ದರು. ಅವರು ಕಳೆದ ವರ್ಷ ಡಿಸೆಂಬರ್ನಲ್ಲಿ ನಿವೃತ್ತರಾಗಿದ್ದರು. ಅಂದಿನಿಂದ ಎನ್ ಎಚ್ ಆರ್ ಸಿಯಲ್ಲಿ ಅಧ್ಯಕ್ಷ ಹುದ್ದೆ ಖಾಲಿಯಾಗಿತ್ತು. ಮೂವರು ಮಾಜಿ ಮುಖ್ಯ ನ್ಯಾಯಮೂರ್ತಿಗಳನ್ನು ಸಹ ಈ ಹುದ್ದೆಗಾಗಿ ಶಾರ್ಟ್ ಲಿಸ್ಟ್ ತಯಾರಿಸಲಾಗಿತ್ತು. ಆದರೆ ಸಮಿತಿ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಅವರನ್ನು ಆಯ್ಕೆ ಮಾಡಿದೆ. ಆಯ್ಕೆ ಸಮಿತಿಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕರ್ಜುನ್ ಖರ್ಗೆ ಇದ್ದರು.
ಎನ್ಎಚ್ ಆರ್ ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.