News Kannada
Saturday, January 28 2023

ದೇಶ-ವಿದೇಶ

ಅನಿಲ ಸೋರಿಕೆ: ಉಸಿರಾಟ ಸಮಸ್ಯೆ ಎದುರಿಸಿದ ಜನ

Photo Credit :

ಅನಿಲ ಸೋರಿಕೆ: ಉಸಿರಾಟ ಸಮಸ್ಯೆ ಎದುರಿಸಿದ ಜನ

ಮುಂಬೈ: ಮಹಾರಾಷ್ಟ್ರದ ಬದ್ಲಾಪುರದ ರಾಸಾಯನಿಕ ಕಾರ್ಖಾನೆಯಲ್ಲಿ ತಡರಾತ್ರಿ ಅನಿಲ ಸೋರಿಕೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿತ್ತು. ಶಿರ್ಗಾಂವ್ ಎಂಐಡಿಸಿಯ ನೊಬೆಲ್ ಇಂಟರ್ಮೀಡಿಯೇಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಅನಿಲ ಸೋರಿಕೆಯಾದ ನಂತರ ಮೂರು ಕಿಲೋಮೀಟರ್ ಪ್ರದೇಶಕ್ಕೆ ವ್ಯಾಪಿಸಿದ್ದು, ಉಸಿರಾಟ ಸಮಸ್ಯೆ ಮತ್ತು ಕಣ್ಣುಗಳಲ್ಲಿ ಉರಿಯುತ್ತಿರುವ ಬಗ್ಗೆ ಜನರು ದೂರಿದ್ದಾರೆ.
ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದ ಅನಿಲ ಸೋರಿಕೆ ದುರಂತವು 1 ಗಂಟೆ ಒಳಗೆ ತಹಬದಿಗೆ ಬಂದಿದೆ. 11 ಗಂಟೆ ಸುಮಾರಿಗೆ ಅಗ್ನಿಸಾಮಕ ದಳದ ಸಿಬ್ಬಂದಿ ಅನಿಲ ಸೋರಿಕೆಯನ್ನು ತಡೆಹಿಡಿದಿದೆ. ಯಾರಿಗೂ ಅಪಾಯವಾಗಿಲ್ಲ ಎಂದು ಥಾಣೆ ಮಹಾನಗರ ಪಾಲಿಕೆ ತಿಳಿಸಿದೆ. ಅನಿಲ ಸೋರಿಕೆಯಿಂದ ಸಮಸ್ಯೆ ಎದುರಿಸಿದ ಕೆಲವರನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಎಎನ್‌ಐ ಟ್ವೀಟ್ ಮಾಡಿರುವ ವಿಡಿಯೊದಲ್ಲಿ ಜನರು ಮುಖ ಮುಚ್ಚಿಕೊಂಡು ಓಡಾಡುತ್ತಿರುವ ದೃಶ್ಯ ಕಂಡುಬಂದಿದೆ. ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಪೊಲೀಸರು ಜನರಿಗೆ ಭರವಸೆ ನೀಡಿದ್ದಾರೆ. ವಿಶಾಖಪಟ್ಟಣದಲ್ಲಿ ಸಂಭವಿಸಿದ ಅನಿಲ ದುರಂತ ಪ್ರಕರಣದಲ್ಲಿ ಹಲವರು ಅಸುನೀಗಿದ್ದರು. ಇದಾದ ಕೆಲವೇ ತಿಂಗಳುಗಳಲ್ಲಿ ಅನಿಲ ಸೋರಿಕೆ ಪ್ರಕರಣಗಳು ಪದೇ ಪದೇ ವರದಿಯಾಗುತ್ತಿದ್ದು, ಆತಂಕಕ್ಕೆ ಎಡೆಮಾಡಿದೆ.

See also  ಈಶಾನ್ಯ ರಾಜ್ಯಗಳಲ್ಲಿ ಭೂಕಂಪನ: ಆರು ಸಾವು, ನೂರಾರು ಜನರಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು