News Kannada
Friday, December 02 2022

ದೇಶ-ವಿದೇಶ

ಭಾರತೀಯರು ಸ್ವಿಸ್ ಬ್ಯಾಂಕ್ ಗಳನ್ನು ಇಟ್ಟಿರುವ ಹಣದ ಮೊತ್ತದಲ್ಲಿ ಏರಿಕೆ

Photo Credit :

‘ಡಾರ್ಲಿಂಗ್ಸ್’ ಚಿತ್ರದ ಸಿದ್ಧತೆಯಲ್ಲಿ ನಟಿ ಆಲಿಯಾ ಭಟ್

ನವದೆಹಲಿ : ಭಾರತೀಯರು ವೈಯಕ್ತಿಕವಾಗಿ ಮತ್ತು ಬೇರೆ ಬೇರೆ ಹಣಕಾಸು ಸಂಸ್ಥೆಗಳ ಮೂಲಕ ಸ್ವಿಸ್ ಬ್ಯಾಂಕ್ ಗಳನ್ನು ಇಟ್ಟಿರುವ ಹಣದ ಮೊತ್ತ 20,700 ಕೋಟಿ ರೂ.ಗೆ ಜಿಗಿದಿದೆ.
13 ವರ್ಷಗಳಲ್ಲೇ ಇದು ಗರಿಷ್ಠ ಮೊತ್ತವಾಗಿದ್ದರೂ ವೈಯಕ್ತಿಕ ಹಣ ಠೇವಣಿಯಲ್ಲಿ ಇಳಿಕೆಯಾಗಿದೆ ಎಂದು ಸ್ವಿಜರ್ಲೆಂಡ್ ಕೇಂದ್ರೀಯ ಬ್ಯಾಂಕ್ ಹೇಳಿದೆ.
ಬ್ಯಾಂಕ್ 2020ರ ವಾರ್ಷಿಕ ವರದಿಯಲ್ಲಿ ಮಾಹಿತಿ ನೀಡಿದ್ದು, ಸೆಕ್ಯೂರೀಟಿಸ್ ಮತ್ತು ಅದೇ ರೀತಿಯ ಇತರ ಮಾದರಿಯ ಹೂಡಿಕೆಯಿಂದಾಗಿ ಮೊತ್ತ ಏರಿಕೆಯಾಗಿದೆ. ಭಾರತದಲ್ಲಿನ ಸ್ವಿಜರ್ಲೆಂಡ್ ಬ್ಯಾಂಕಿನಲ್ಲಿರುವ ಹಣವು ಇದರಲ್ಲಿ ಸೇರಿದೆ ಎಂದು ತಿಳಿಸಿದೆ. ಈ ಹಣದಲ್ಲಿ ಭಾರತೀಯರು, ಅನಿವಾಸಿ ಭಾರತೀಯರು ಬೇರೆ ದೇಶಗಳ ಸಂಸ್ಥೆಗಳ ಹೆಸರಿನಲ್ಲಿ ಇಡಲಾಗಿರುವ ಹಣವನ್ನು ಸೇರಿಸಿಲ್ಲ. 2006ರಲ್ಲಿ ಸ್ವಿಸ್ ಬ್ಯಾಂಕ್‍ಗಳಲ್ಲಿ ಒಟ್ಟು 23,000 ಕೋಟಿ ರೂ. ಹಣವನ್ನು ಇಡಲಾಗಿತ್ತು. ಇದು ಇಲ್ಲಿಯವರೆಗೆ ಭಾರತೀಯರು ಇರಿಸಿದ್ದ ಗರಿಷ್ಠ ಮೊತ್ತವಾಗಿತ್ತು. 2010, 2013, 2017 ಹೊರತು ಪಡಿಸಿ ನಂತರದ ವರ್ಷಗಳಲ್ಲಿ ಠೇವಣಿ ಇಳಿಕೆಯಾಗಿತ್ತು. ಆದರೆ 2020ರಲ್ಲಿ ಈ ಮೊತ್ತ 20,700 ಕೋಟಿ ರೂ.ಗೆ ಜಿಗಿದಿದೆ. 2019ರಲ್ಲಿ ಭಾರತೀಯರು ವೈಯಕ್ತಿಕವಾಗಿ 4,500 ಕೋಟಿ ರೂ. ಇಟ್ಟಿದ್ದರು. ಆದರೆ ಈಗ ಇದು 4,000 ಕೋಟಿ ರೂ.ಗೆ ಇಳಿಕೆಯಾಗಿದೆ.
ವೆಸ್ಟ್ ಇಂಡೀಸ್, ಫ್ರಾನ್ಸ್, ಹಾಂಕಾಂಗ್, ಜರ್ಮನಿ, ಸಿಂಗಾಪುರ, ಲಕ್ಸೆಂಬರ್ಗ್, ಕೇಮನ್ ದ್ವೀಪಗಳು ಮತ್ತು ಬಹಾಮಾಸ್ ಅನುಕ್ರಮವಾಗಿ ಟಾಪ್ 10 ಸ್ಥಾನವನ್ನು ಪಡೆದಿವೆ. ಪಟ್ಟಿಯಲ್ಲಿ ಭಾರತ 51ನೇ ಸ್ಥಾನ ಪಡೆದಿದೆ.
ಕಪ್ಪು ಹಣವನ್ನು ಸ್ವಿಸ್ ಬ್ಯಾಂಕ್‍ಗಳು ಇಡಲಾಗುತ್ತದೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ಇಲ್ಲಿ ಠೇವಣಿ ಇರಿಸಿದ್ದ ಹಣಗಳು ಎಲ್ಲವೂ ಕಪ್ಪು ಹಣ ಎಂದೇ ಗುರುತಿಸಲಾಗುತ್ತಿತ್ತು. ಆದರೆ ಈಗ ವ್ಯವಸ್ಥೆ ಬದಲಾಗಿದ್ದು ತನ್ನ ಬ್ಯಾಂಕ್‍ಗಳಲ್ಲಿ ಹಣ ಇಟ್ಟ ವಿವರವನ್ನು ಸರ್ಕಾರಗಳಿಗೆ ನೀಡುತ್ತದೆ. ಹೀಗಾಗಿ ಇಲ್ಲಿ ಠೇವಣಿ ಇಟ್ಟ ಎಲ್ಲ ಹಣವೂ ಕಪ್ಪು ಹಣ ಎಂದು ಕರೆಯಲು ಬರುವುದಿಲ್ಲ. ಈಗ ‘ಕಪ್ಪು ಕುಳಗಳು’ಸ್ವಿಸ್ ಬ್ಯಾಂಕುಗಳಲ್ಲಿ ಹೆಚ್ಚಿನ ಹಣವನ್ನು ಇಡುತ್ತಿಲ್ಲ.

See also  ಎಂಡಿಎಚ್ ಸಾಂಬರ್ ಮಸಾಲಕ್ಕೆ ಅಮೆರಿಕಾ ನಿಷೇಧ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು