ಟೋಕಿಯೊ: ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಭಾರತದ ವಿನೋದ್ ಕುಮಾರ್ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ.
19.91 ಮೀಟರ್ ದೂರ ಡಿಸ್ಕಸ್ ಎಸೆದು ಪದಕಕ್ಕೆ ಕೊರಳೊಡ್ಡಿದ್ದಾರೆ. ಮಾತ್ರವಲ್ಲದೆ ಏಷಿಯನ್ ದಾಖಲೆಯನ್ನೂ ನಿರ್ಮಿಸಿದರು. ಪೋಲೆಂಡ್ನ ಪಿಯೋಟರ್ ಕೊಸೆವಿಕ್ಜ್ (20.02ಮೀ), ಕ್ರೊವೇಷಿಯಾದ ವೆಲಿಮಿರ್ ಸ್ಯಾಂಡೊರ್ (19.98ಮೀ) ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕ ಬಾಚಿಕೊಂಡರು.
ಭಾನುವಾರ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾವಿನಾ ಬೆನ್ ಪಟೇಲ್ ಮತ್ತು ಎತ್ತರ ಜಿಗಿತ ಸ್ಪರ್ಧೆಯಲ್ಲಿ ನಿಶಾದ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಭಾರತಕ್ಕೆ ಭಾನುವಾರ ಒಟ್ಟು ಮೂರು ಪದಕಗಳು ಬಂದಂತಾಗಿದೆ.