ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಸಂಜೆ 6.30ಕ್ಕೆ 76ನೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಸದಸ್ಯತ್ವ ಹೆಚ್ಚಿನ ಮಹತ್ವ ಪಡೆದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ತಿಳಿಸಿದ್ದಾರೆ.
ಕಳೆದ ಎರಡು ದಿನಗಳ ಕಾಲ ಸತತ ಸಭೆಗಳು, ಮಾತುಕತೆಯಲ್ಲಿ ತೊಡಗಿದ್ದ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಭಾರತೀಯ ಸ್ಥಳೀಯ ಕಾಲಮಾನದ ಪ್ರಕಾರ ನ್ಯೂಯಾರ್ಕ್ ಗೆ ತೆರಳಿದ್ದಾರೆ. ಕಳೆದ ಬುಧವಾರ ಮೂರು ದಿನಗಳ ಅಮೆರಿಕ ಭೇಟಿಗಾಗಿ ಪ್ರಧಾನಿ ಮೋದಿ ಇಲ್ಲಿಗೆ ಬಂದಿದ್ದರು.
ನಿನ್ನೆ ಅಮೆರಿಕ ಅಧ್ಯಕ್ಷ ಜೊ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ಟ್ ಮಾರ್ರಿಸನ್ ಮತ್ತು ಜಪಾನ್ ಪ್ರಧಾನಿ ಯೊಶಿಹಿಡೆ ಸುಗ ಅವರೊಂದಿಗೆ ಸಹ ಮಾತುಕತೆ ನಡೆಸಿದ್ದಾರೆ. ನಂತರ ವೈಯಕ್ತಿಕವಾಗಿ ಕ್ವಾಡ್ ಶೃಂಗಸಭೆಯಲ್ಲಿ ಕೂಡ ಭಾಗವಹಿಸಲಿದ್ದಾರೆ.