ಕಠ್ಮಂಡು: ಬುದ್ಧ ಪೂರ್ಣಿಮ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ನೆರೆಯ ರಾಷ್ಟ್ರ ನೇಪಾಳಕ್ಕೆ ಒಂದು ದಿನದ ಪ್ರವಾಸ ಕೈಗೊಂಡಿದ್ದಾರೆ. ಇದೇ ವೇಳೆ ಗೌತಮ ಬುದ್ಧನ ಜನ್ಮಸ್ಥಳ ಲುಂಬಿನಿಗೆ ಭೇಟಿ ನೀಡಲಿದ್ದಾರೆ.
ಇದೇ ವೇಳೆ ಮೋದಿಯವರು, ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಭೇಟಿಯಾಗಲಿದ್ದು, ಜಲವಿದ್ಯುತ್, ಅಭಿವೃದ್ಧಿ ಮತ್ತು ಸಂಪರ್ಕದಂತಹ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುವ ಸಾಧ್ಯತೆಯಿದೆ.
ಪಕ್ಷ ಸಂಘಟನೆಗೆ ಕಾಂಗ್ರೆಸ್ ನಾಯಕರಿಂದ ಮಹತ್ವದ ತೀರ್ಮಾನ: ಸಲಹಾ ಗುಂಪು & ಸಂಘಟನೆ ಸುಧಾರಣೆಗೆ ನಿರ್ಧಾರ
2014 ರಿಂದ ನೇಪಾಳಕ್ಕೆ ಮೋದಿಯವರ ಐದನೇ ಭೇಟಿ ಇದಾಗಿದೆ. ಸ್ಥಳೀಯ ಕಾಲಮಾನ ರಾತ್ರಿ 10 ಗಂಟೆಗೆ ಲುಂಬಿನಿ ತಲುಪಲಿದ್ದು, ಸಂಜೆ 5 ಗಂಟೆಗೆ ಹಿಂತಿರುಗಲಿದ್ದಾರೆ. ಮಾಯಾ ದೇವಿಯ ದೇವಸ್ಥಾನಕ್ಕೂ ಭೇಟಿ ನೀಡುವ ಮೂಲಕ ಮೋದಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಬುದ್ಧ ಜಯಂತಿ ನಿಮಿತ್ತ ಲುಂಬಿನಿ ಡೆವಲಪ್ಮೆಂಟ್ ಟ್ರಸ್ಟ್ ಆಯೋಜಿಸಿರುವ ಸಮಾರಂಭದಲ್ಲಿ ಮೋದಿ ಭಾಷಣ ಮಾಡಲಿದ್ದು, ಲುಂಬಿನಿ ಮೊನಾಸ್ಟಿಕ್ ವಲಯದಲ್ಲಿ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಹೊರಡಿಸಿದ ಹೇಳಿಕೆಯ ಪ್ರಕಾರ, ಉಭಯ ನಾಯಕರು ನೇಪಾಳ-ಭಾರತದ ಸಹಕಾರ ಮತ್ತು ಪರಸ್ಪರ ಹಿತಾಸಕ್ತಿಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಕಳೆದ ತಿಂಗಳು ದೇವುಬಾ ಅವರ ಭಾರತ ಭೇಟಿಯ ಸಂದರ್ಭದಲ್ಲಿ ನಡೆದ ಪ್ರಯೋಜನಕಾರಿ ಚರ್ಚೆಗಳ ನಂತರ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರನ್ನು ಮತ್ತೊಮ್ಮೆ ಭೇಟಿಯಾಗಲು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಭಾರತೀಯ ರಾಯಭಾರ ಕಚೇರಿ ಮೂಲಗಳ ಪ್ರಕಾರ, ವಿದೇಶಾಂಗ ಸಚಿವ ಎಸ್ ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ಕ್ವಾತ್ರಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಪ್ರಧಾನಿ ಮೋದಿ ಭೇಟಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
Delhi | Prime Minister Narendra Modi departs for Kushinagar, UP ahead of his visit to Nepal’s Lumbini, at the invitation of Nepal PM Sher Bahadur Deuba on the occasion of #BuddhaPurnima pic.twitter.com/Vf3YXnaucR
— ANI (@ANI) May 16, 2022