News Kannada
Tuesday, February 07 2023

ದೇಶ-ವಿದೇಶ

ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಜಪಾನ್ ತಲುಪಿದ ಪ್ರಧಾನಿ ಮೋದಿ

Photo Credit : Twitter

ಟೋಕಿಯೊ: ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ ಜಪಾನ್‌ ತಲುಪಿದರು.

ಪ್ರಧಾನಿ ಅವರು ಇಂದು (ಸೋಮವಾರ) ಹಾಗೂ ನಾಳೆ ಎರಡು ದಿನಗಳ ಜಪಾನ್ ಪ್ರವಾಸದಲ್ಲಿದ್ದು, ಕ್ವಾಡ್ ನಾಯಕರ ಶೃಂಗಸಭೆ ಜತೆಗೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

‘ಟೋಕಿಯೊದಲ್ಲಿ ಬಂದಿಳಿದಿದ್ದೇನೆ. ಕ್ವಾಡ್ ಶೃಂಗಸಭೆ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದೇನೆ. ಕ್ವಾಡ್ ನಾಯಕರ ಜತೆ ಮಾತುಕತೆ ನಡೆಸಲಿದ್ದೇನೆ. ಜಪಾನ್‌ನ ಉದ್ಯಮಿಗಳ ಜತೆ ಹಾಗೂ ಭಾರತೀಯ ಸಮುದಾಯದವರ ಜತೆ ಸಂವಾದ ನಡೆಸಲಿದ್ದೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿಯವರು ಟೋಕಿಯೊಗೆ ಆಗಮಿಸಿದ್ದು ಅವರಿಗೆ ಭವ್ಯ ಸ್ವಾಗತ ದೊರೆಯಿತು. ಕಳೆದ 8 ವರ್ಷಗಳಲ್ಲಿ ಅವರು 5ನೇ ಬಾರಿಗೆ ಜಪಾನ್‌ಗೆ ಭೇಟಿ ನೀಡಿದ್ದಾರೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ಟ್ವೀಟ್ ಮಾಡಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ, ಆಸ್ಟ್ರೇಲಿಯಾದ ನೂತನ ಪ್ರಧಾನಿ ಆಂಥೋನಿ ಅಲ್ಬನೀಸ್ ಸಹ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

‘ಜಪಾನ್‌ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಟೋಕಿಯೊಗೆ ಭೇಟಿ ನೀಡಲಿದ್ದೇನೆ. ಭೇಟಿಯ ಸಂದರ್ಭದಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಬಲಪಡಿಸುವ ಗುರಿಯೊಂದಿಗೆ ಮಾತುಕತೆಯನ್ನು ಮತ್ತಷ್ಟು ಮುಂದುವರಿಸಲು ಎದುರು ನೋಡುತ್ತಿದ್ದೇನೆ’ ಎಂದು ಜಪಾನ್‌ಗೆ ಪ್ರಯಾಣ ಆರಂಭಿಸುವ ಮುನ್ನ ಮೋದಿ ಹೇಳಿದ್ದರು.

See also  ಒಮಿಕ್ರಾನ್ ಭೀತಿ ಹಿನ್ನೆಲೆ, ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲು ಪ್ರಧಾನಿ ಮೋದಿಗೆ ಮನವಿ ಮಾಡಿದ; ಕೇಜ್ರಿವಾಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು