ಜೆಡ್ಡಾ: ಕರೋನಾ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ತನ್ನ ನಾಗರಿಕರಿಗೆ ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.
ಲೆಬನಾನ್, ಸಿರಿಯಾ, ಟರ್ಕಿ, ಇರಾನ್, ಅಫ್ಘಾನಿಸ್ತಾನ, ಯೆಮೆನ್, ಸೊಮಾಲಿಯಾ, ಇಥಿಯೋಪಿಯಾ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ದಿ ಕಾಂಗೋ, ಲಿಬಿಯಾ, ಇಂಡೋನೇಷಿಯಾ, ವಿಯೆಟ್ನಾಂ, ಅರ್ಮೇನಿಯಾ, ಬೆಲಾರಸ್ ಮತ್ತು ವೆನೆಜುವೆಲಾ ಸೇರಿದಂತೆ ಸೌದಿ ಅರೇಬಿಯಾದ ಪ್ರಜೆಗಳು ಭಾರತದ ಹೊರತಾಗಿ ಪ್ರಯಾಣಿಸುವುದನ್ನು ನಿಷೇಧಿಸಿದೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.
ಇದಲ್ಲದೆ, ಸೌದಿ ಅರೇಬಿಯಾದಲ್ಲಿ ಯಾವುದೆ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಯಾವುದೇ ಶಂಕಿತ ಮಂಕಿಪಾಕ್ಸ್ ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಲು, ಪತ್ತೆಹಚ್ಚಲು ಮತ್ತು ಯಾವುದೇ ಹೊಸ ಪ್ರಕರಣಗಳು ಕಂಡು ಬಂದರೆ ಸೋಂಕಿನ ವಿರುದ್ಧ ಹೋರಾಡಲು ಮತ್ತು ಸೋಂಕನ್ನು ತಡೆಗಟ್ಟಲು ಸಾಮ್ರಾಜ್ಯವು ಸಾಮರ್ಥ್ಯ ಹೊಂದಿದೆ ಎಂದು ಆರೋಗ್ಯ ಇಲಾಖೆಯ ಉಪ ಸಚಿವ ಅಬ್ದುಲ್ಲಾ ಅಸಿರಿ ಹೇಳಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ 11 ದೇಶಗಳಲ್ಲಿ 80 ಮಂಕಿಪಾಕ್ಸ್ ಪ್ರಕರಣಗಳನ್ನು ದೃಢಪಡಿಸಿದ್ದು, ಏಕಾಏಕಿ ಸೋಂಕಿನ ಪ್ರಮಾಣ ಹರಡುತ್ತಿರುವ ಕುರಿತಂತೆ ಕೆಲಸ ಮಾಡುತ್ತಿದೆ ಎಂದು ಹೇಳಿದೆ.