News Kannada
Sunday, April 02 2023

ದೇಶ-ವಿದೇಶ

ಟರ್ಕಿ, ಸಿರಿಯಾದಲ್ಲಿ ಭೂಕಂಪ: 12,000 ದಾಟಿದ ಸಾವಿನ ಸಂಖ್ಯೆ

Death toll surpasses 12,000 as quake relief in Turkey, Syria enters 3rd day
Photo Credit : IANS

ಅಂಕಾರಾ/ ಡಮಾಸ್ಕಸ್: ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಭೂಕಂಪನದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 12,000 ದಾಟಿದೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ಹುಡುಕಾಟ ನಡೆಯುತ್ತಿದೆ. ಭಾರತದಿಂದ 4 ವಿಮಾನಗಳಲ್ಲಿ ರಕ್ಷಣ ತಂಡ ತೆರಳಿದ್ದು, ಪರಿಹಾರ ಕಾರ್ಯದಲ್ಲಿ ತೊಡಗಿದೆ. ಈ ಮಧ್ಯೆ ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡಿರುವವರ ಆಕ್ರಂದನ ಮುಗಿಲು ಮುಟ್ಟಿದೆ. ಅಲ್ಲದೆ, ಬಹಳಷ್ಟು ಮಂದಿ ತೀವ್ರ ಚಳಿಯಿಂದಾಗಿಯೇ ಸಾವನ್ನಪ್ಪುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಭೂಕಂಪದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 12,000 ದಾಟಿದ್ದು, ಈ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಇದರ ಮಧ್ಯೆಯೇ, ಬೆಂಗಳೂರಿನಿಂದ ಟರ್ಕಿಗೆ ತೆರಳಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದು, ಈ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.

ವಿದೇಶಾಂಗ ಇಲಾಖೆಯ ಅಧಿಕಾರಿ ಸಂಜಯ್‌ ವರ್ಮಾ ಅವರ ಪ್ರಕಾರ, ಬೆಂಗಳೂರಿನ ಉದ್ಯಮಿಯೊಬ್ಬರು ಟರ್ಕಿಯಲ್ಲಿ ನಾಪತ್ತೆಯಾಗಿದ್ದಾರೆ. ಸದ್ಯ ಇವರ ಕಂಪೆನಿ ಮತ್ತು ಕುಟುಂಬಸ್ಥರ ಜತೆ ಸಂಪರ್ಕ ಸಾಧಿಸಿದ್ದೇವೆ. ಇವರು ವ್ಯವಹಾರ ನಿಮಿತ್ತ ಟರ್ಕಿಗೆ ತೆರಳಿದ್ದರು ಎಂದು ಹೇಳಿದ್ದಾರೆ.

ಉಳಿದಂತೆ ಇನ್ನೂ 10 ಮಂದಿ ಭಾರತೀಯರು ಟರ್ಕಿಯ ವಿವಿಧ ಭಾಗಗಳಲ್ಲಿ ಸಿಲುಕಿರುವ ಮಾಹಿತಿ ತಿಳಿದು ಬಂದಿದೆ. ಇವರೆಲ್ಲರೂ ಸುರಕ್ಷಿತವಾಗಿದ್ದಾರೆ. ಇದಲ್ಲದೇ ಭಾರತೀಯರ ನೆರವಿಗಾಗಿ ಟರ್ಕಿಯ ಅಡಾನಾದಲ್ಲಿ ಕಂಟ್ರೋಲ್‌ ರೂಂ ಸ್ಥಾಪಿಸಲಾಗಿದೆೆ ಎಂದು ಇಲಾಖೆ ಹೇಳಿದೆ.

 

See also  ರೈತರಿಗೆ ಮತ್ತೊಂದು ಬರೆ; ರಸಗೊಬ್ಬರದ ಬೆಲೆ ಹೆಚ್ಚಿಸಿದ ಇಫ್ಕೊ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು