ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗದಂತೆ ತಡೆದದ್ದು ಸೋನಿಯಾ, ರಾಹುಲ್!

ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗದಂತೆ ತಡೆದದ್ದು ಸೋನಿಯಾ, ರಾಹುಲ್!

HSA   ¦    Mar 14, 2019 03:44:33 PM (IST)
ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗದಂತೆ ತಡೆದದ್ದು ಸೋನಿಯಾ, ರಾಹುಲ್!

ಮಂಡ್ಯ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ವೇಳೆ ಕಾಂಗ್ರೆಸ್ ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾಗದಂತೆ ತಡೆದಿರುವುದು ಸೋನಿಯಾ ಹಾಗೂ ರಾಹುಲ್ ಗಾಂಧಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ಮಂಡ್ಯದಲ್ಲಿ ಗುರುವಾರ ನಡೆದ ಜೆಡಿಎಸ್ ಸಮಾವೇಶದಲ್ಲಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ಕುಮಾರಸ್ವಾಮಿ ಅವರು ಸಿಎಂ ಆಗಲು ಒಪ್ಪದೆ ಇದ್ದಾಗ, ಖರ್ಗೆ ಅವರು ಮುಖ್ಯಮಂತ್ರಿ ಆಗಲಿದೆ ಎಂದು ನಾನು ಹೇಳಿದ್ದೆ. ಆದರೆ ಕುಮಾರಸ್ವಾಮಿ ಅವರೇ ಸಿಎಂ ಆಗಲಿದೆ ಎಂದು ಸೋನಿಯಾ ಮತ್ತು ರಾಹುಲ್ ಹೇಳಿದ್ದರು ಎಂದು ದೇವೇಗೌಡ ತಿಳಿಸಿದ್ದಾರೆ.