ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಆಸ್ಪತ್ರೆಗೆ ದಾಖಲು

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಆಸ್ಪತ್ರೆಗೆ ದಾಖಲು

Ms   ¦    Jun 10, 2021 03:42:52 PM (IST)
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಆಸ್ಪತ್ರೆಗೆ ದಾಖಲು

ನವದೆಹಲಿ : ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಮಲ್ ನಾಥ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. 

 

 ಕಮಲ್ ನಾಥ್ ಅವರು ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಗುರು ಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ . ಕೊರೋನಾ ಪರೀಕ್ಷೆ ನಡೆಸಲಾಗಿದ್ದು , ನೆಗೆಟಿವ್ ಬಂದಿದೆ . ಇದೀಗ ಕಮಲ್ ನಾಥ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ .