ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ದರ ಏರಿಕೆ

ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ದರ ಏರಿಕೆ

Jun 01, 2016 05:06:19 PM (IST)

ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನಲ್ಲೇ ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಗಳ ಮೇಲಿನ ದರ ಏರಿಕೆ ಮಾಡಲಾಗಿದ್ದು, ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ದರದಲ್ಲಿ 21 ರು ಏರಿಕೆ ಮಾಡಲಾಗಿದೆ.

ಮಂಗಳವಾರ ಮಧ್ಯರಾತ್ರಿಯಿಂದ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2.85ರು ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 2.26ರು ಏರಿಕೆಯಾಗಿದೆ. ಬುಧವಾರದಿಂದ ಎಲ್ ಪಿಜಿ ಪ್ರತಿ ಸಿಲಿಂಡರ್ ಬೆಲೆ 21ರು ಏರಿಕೆಯಾಗಲಿದೆ.  ಜತೆಗೆ ವಿಮಾನ ಇಂಧನ ದರ ಕೂಡಾ ಶೇ 9.2ರಷ್ಟು ಏರಿಕೆಯಾಗಿದೆ.  ಇಂಡಿಯನ್ ಆಯಿಲ್ ಕಾರ್ಪೆರೇಷನ್, ಹಿಂದುಸ್ತಾನ್ ಪೆಟ್ರೋಲಿಯಂ ಮತ್ತು ಭಾರತ್ ಪೆಟ್ರೋಲಿಯಂ ಈ ಮೂರು ಕಂಪನಿಗಳೂ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ದಕ್ಕೆ ಅನುಗುಣವಾಗಿ  ಪ್ರತಿ ತಿಂಗಳಲ್ಲಿ 2 ಬಾರಿ ಪರಿಷ್ಕೃತ ದರ ಪ್ರಕಟಿಸುತ್ತಿದ್ದು, ಅಂತೆಯೇ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿತ್ತು. ಅದರಂತೆ ಪೆಟ್ರೋಲ್ ಪ್ರತಿ ಲೀಟರ್​ಗೆ 2.58 ರು.,  ಡೀಸೆಲ್ ಪ್ರತಿ ಲೀಟರ್​ಗೆ 2.26 ರೂ. ಏರಿಕೆಯಾಗಿ, ಮಂಗಳವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ.